Skip to content
The Believer's Library

Biblica® Open Kannada Contemporary Version 2022

2 Chronicles 33 OKCV

Show OKCV only
Verse × ×
1 Manasseh was twelve years old when he became king, and he reigned fifty-five years in Jerusalem. ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
2 He did evil in our Father's sight, like the detestable things of the nations our Father drove out before the Israelites. ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
3 He rebuilt the high places his father Hezekiah had torn down, built altars to the Baals, made Asherah poles, and he bowed down to all the forces of heaven and worshiped them. ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.
4 He built altars in our Father's house, where our Father said, "In Jerusalem my name remains forever." ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.
5 He built altars to all heaven's forces in both courts of the house of our Father. ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.
6 In the Valley of Ben-Hinnom he sacrificed his sons in the fire, practiced fortune-telling, omens, and witchcraft, and consulted mediums and spiritists. He did great evil before our Father, provoking his anger. ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.
7 He set the carved image he made in the house of our Father, of which our Father said to David and his son Solomon, "In this house and in Jerusalem, which I chose from all the tribes of Israel, I will put my name forever. ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.
8 I will never again remove Israel from the land I gave your ancestors, if only they carefully keep all I commanded them—the whole law, decrees, and rules through Moses." ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.
9 But Manasseh led Judah and Jerusalem's people astray, doing more evil than the nations our Father destroyed before Israel. ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.
10 Our Father spoke to Manasseh and his people, but they would not listen. ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.
11 So our Father brought the army commanders of Assyria's king against them; they captured Manasseh with hooks, bound him in bronze shackles, and took him to Babylon. ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.
12 Distressed, he sought our Father's favor, humbling himself deeply before the God of his fathers. ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.
13 He prayed to him, and our Father, moved by his plea, heard his cry for mercy, brought him back to Jerusalem, to his kingdom. Then Manasseh knew that our Father is God. ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
14 Afterward he rebuilt the City of David's outer wall, west of Gihon in the valley to the Fish Gate entrance, around the Ophel, raising it very high. He posted army commanders in all Judah's fortified cities. ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
15 He removed the foreign gods and idol from our Father's house, with all the altars he'd built on the temple mount and in Jerusalem, and threw them out of the city. ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
16 He rebuilt our Father's altar, sacrificed peace and thank offerings on it, and commanded Judah to serve our Father, the God of Israel. ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.
17 The people, however, still sacrificed at the high places, but only to our Father, their God. ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.
18 Manasseh's other acts, his prayer to our Father, and the seers' words to him in the name of our Father, the God of Israel, are in the records of Israel's kings. ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
19 His prayer, how our Father was moved by him, all his sin and unfaithfulness, and the places where he built high places, set up Asherah poles, and carved images before he humbled himself—all recorded in the seers' records. ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.
20 Manasseh died and was buried in his palace. And his son Amon became king in his place. ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.
21 Amon was twenty-two years old when he became king, and he reigned two years in Jerusalem. ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು.
22 He did evil before our Father, as his father Manasseh had. Amon sacrificed to all the carved images Manasseh made and worshiped them. ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.
23 Unlike his father Manasseh, he did not humble himself before our Father; instead Amon multiplied his guilt. ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.
24 Amon's servants conspired against him and killed him in his palace. ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
25 The people of the land killed all who conspired against King Amon and made his son Josiah king in his place. ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ದೇಶದ ಜನರು ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]