Skip to content
The Believer's Library

Biblica® Open Kannada Contemporary Version 2022

2 Chronicles 34 OKCV

Show OKCV only
Verse × ×
1 Josiah was eight years old when he became king, and he reigned thirty-one years in Jerusalem. ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
2 He did what was right in our Father's eyes and walked in the ways of David his father, not turning right or left. ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
3 In the eighth year of his reign, while still a boy, he began to seek our Father, the God of David his father. In the twelfth year he began to purge Judah and Jerusalem of the high places, Asherah poles, carved images, and cast metal images. ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
4 In his presence they tore down the Baals' altars; he cut down the incense altars above them, shattered the Asherah poles, carved images, and cast images, ground them to dust, and scattered it over the graves of those who had sacrificed to them. ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,
5 He burned the bones of the priests on their altars, and so he purged Judah and Jerusalem. ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.
6 In the cities of Manasseh, Ephraim, and Simeon, as far as Naphtali, in their ruins all around. ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.
7 He tore down the altars, crushed the Asherah poles and carved images to powder, and cut down all the incense altars throughout Israel. Then he returned to Jerusalem. ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.
8 In the eighteenth year of his reign, having cleansed the land and the house, he sent Shaphan son of Azaliah, Maaseiah the city governor, and Joah son of Joahaz the recorder to repair the house of our Father. ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
9 They came to Hilkiah the high priest and handed over the money brought into the house of our Father, which the Levites who guarded the gates had collected from Manasseh, Ephraim, and all the remnant of Israel, from all Judah and Benjamin, and the residents of Jerusalem. ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.
10 They gave it to the workers overseeing the house of our Father, and the workers in the house of our Father used it to repair and restore it. ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.
11 They paid the carpenters and builders to buy cut stone, and timber for the joists and beams of the buildings the kings of Judah had let fall to ruin. ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.
12 The men worked faithfully. Over them, directing the work, were Jahath and Obadiah, Levites of Merari's sons, and Zechariah and Meshullam of the Kohathites; and the Levites, all skilled musicians, ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.
13 were over the laborers, directing all the workers task by task. Some Levites were scribes, officials, and gatekeepers. ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.
14 As they brought out the money brought into the house of our Father, Hilkiah the priest found the Book of the Law of our Father, given through Moses. ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.
15 Hilkiah told Shaphan the scribe, "I've found the Book of the Law in our Father's house," and gave it to Shaphan. ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.
16 Shaphan brought the king the book and reported, "Your servants are doing everything put in their care. ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.
17 They emptied out the money found in the house of our Father and handed it to the overseers and workmen." ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.
18 Shaphan the scribe told the king, "Hilkiah the priest gave me a book," and read it to the king. ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
19 When the king heard the words of the Law, he tore his clothes. ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
20 The king commanded Hilkiah, Ahikam son of Shaphan, Abdon son of Micah, Shaphan the scribe, and Asaiah the king's servant: ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
21 "Go, ask our Father for me and those left in Israel and Judah about the words of the book that was found. Great is his anger poured out on us, because our ancestors did not keep our Father's word, doing all written in this book." “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
22 So Hilkiah and the king's men went to Huldah, the woman prophet, wife of Shallum son of Tokhath, son of Hasrah, keeper of the wardrobe. She lived in Jerusalem's Second Quarter. They spoke with her about this. ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
23 She told them, "This is what our Father, the God of Israel, says: Tell the man who sent you to me: ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
24 This is what our Father says: I am about to bring disaster on this place and its residents—all the curses written in the book read to the king of Judah. ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.
25 Because they abandoned me and made offerings to other gods, provoking me to anger with all they have made, my wrath will pour out on this place and not be put out. ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
26 But tell the king of Judah, who sent you to inquire of me: This is what our Father, the God of Israel, says about the words you heard: ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
27 Because your heart was tender and you humbled yourself before our Father when you heard his words against this place and its residents, and humbled yourself before me, tore your clothes, and wept before me, I myself have heard you, declares our Father. ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,
28 I will gather you to your ancestors, laid in your grave in peace. Your eyes won't see any of the disaster I'm bringing on this place and its people." So they brought the king this reply. ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
29 Then the king summoned all the elders of Judah and Jerusalem. ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
30 The king went up to the house of our Father with all Judah's men, Jerusalem's residents, the priests, the Levites, and all the people, great and small. He read them all the words of the Book of the Covenant found in the house of our Father. ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
31 The king stood in his place and made a covenant before our Father—to follow our Father, keep his commandments, testimonies, and statutes with all his heart and all his soul, and carry out the covenant's words written in this book. ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.
32 He made everyone present in Jerusalem and Benjamin pledge to it, and the people of Jerusalem acted by the covenant of our Father, the God of their fathers. ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
33 Josiah removed all detestable things from the territory of the people of Israel, and made everyone in Israel serve our Father, their God. As long as he lived, they did not turn from following our Father. ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]