Skip to content
The Believer's Library

Biblica® Open Kannada Contemporary Version 2022

2 Chronicles 35 OKCV

Show OKCV only
Verse × ×
1 Josiah kept Passover to our Father in Jerusalem; they slaughtered the Passover lamb on the fourteenth day of the first month. ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.
2 He assigned priests their duties and encouraged them in service of our Father's house. ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.
3 He told the Levites who taught all Israel and were holy to our Father: "Put the holy ark in the house Solomon son of David, king of Israel, built. You need no longer carry it on your shoulders. Now serve your Father and his people Israel. “ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.
4 Prepare yourselves by your fathers' houses, by your divisions, by David king of Israel's written instructions, and his son Solomon's instructions. ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.
5 Stand in the holy place by family groups of your lay brothers, one Levite division per group. “ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.
6 Slaughter the Passover lamb, dedicate yourselves, and prepare for your brothers, following the word of our Father through Moses." ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.
7 Josiah gave the lay people 30,000 lambs and young goats, 3,000 bulls, for Passover offerings—for everyone present, from his own possessions. ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.
8 His officials also gave willingly to the people, priests, and Levites. Hilkiah, Zechariah, and Jehiel, chief officers of our Father's house, gave the priests 2,600 Passover offerings and 300 bulls. ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
9 Conaniah, with his brothers Shemaiah and Nethanel, and Hashabiah, Jeiel, and Jozabad, Levite leaders, gave the Levites 5,000 Passover offerings and 500 bulls. ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
10 The service was set; priests stood at their posts, Levites by their divisions, as the king commanded. ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
11 They slaughtered the Passover lambs; priests sprinkled the blood passed to them, and Levites skinned them. ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,
12 They set aside the burnt offerings, distributing them by family division among the common people, to offer to our Father as written in the book of Moses; likewise with the bulls. ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.
13 They roasted the Passover lamb in fire as required, boiled the holy offerings in pots, kettles, and pans, and quickly brought them to all the common people. ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.
14 Afterward they prepared for themselves and the priests, since the priests, Aaron's sons, were busy offering burnt offerings and fat portions until night; so the Levites prepared for themselves and the priests, Aaron's sons. ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.
15 The singers, Asaph's sons, stood at their posts as David, Asaph, Heman, and Jeduthun the king's seer had commanded. The gatekeepers stayed at each gate; they had no need to leave their duty, for their fellow Levites prepared for them. ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.
16 So all the service of our Father was arranged that day: to keep Passover and offer burnt offerings on the altar of our Father, by King Josiah's command. ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.
17 The Israelites present kept Passover then, and the Feast of Unleavened Bread seven days. ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.
18 No Passover like it had been kept in Israel since Samuel the prophet's days; none of Israel's kings kept a Passover like Josiah's, with the priests, Levites, all Judah and Israel present, and Jerusalem's residents. ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
19 This Passover was kept in the eighteenth year of Josiah's reign. ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.
20 After all this, once Josiah had prepared the temple, Egypt's king Neco marched up to fight at Carchemish on the Euphrates, and Josiah went out to meet him. ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.
21 But Neco sent messengers to him, saying, "What do we have to do with each other, king of Judah? I'm not coming against you today, but against the house I'm at war with. God told me to hurry—stop opposing God, who is with me, or he'll destroy you." ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”
22 Josiah did not turn away from him, but disguised himself to fight him. He ignored Neco's words from the mouth of our Father, and went to fight in the plain of Megiddo. ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.
23 Archers shot King Josiah; he told his servants, "Get me out—I'm badly wounded." ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.
24 His servants moved him from the chariot to his second chariot and brought him to Jerusalem, where he died and was buried in his fathers' tombs. All Judah and Jerusalem mourned Josiah. ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.
25 Jeremiah composed laments for Josiah, and to this day all the singers, men and women, sing laments for Josiah. This became a custom in Israel, and it is written in the Laments. ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.
26 The rest of Josiah's acts, and his faithful deeds in keeping with what is written in our Father's law. ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,
27 His acts, first to last, are written in the Book of the Kings of Israel and Judah. ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]