Skip to content
The Believer's Library

Biblica® Open Kannada Contemporary Version 2022

2 Chronicles 36 OKCV

Show OKCV only
Verse × ×
1 The people of the land took Josiah's son Jehoahaz and made him king in Jerusalem in place of his father. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
2 Jehoahaz was twenty-three years old when he became king, and he reigned three months in Jerusalem. ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3 Egypt's king deposed him at Jerusalem and fined the land about 7,500 pounds of silver and 75 pounds of gold. ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4 Egypt's king made his brother Eliakim king over Judah and Jerusalem, renaming him Jehoiakim; Neco took his brother Jehoahaz to Egypt. ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.
5 Jehoiakim was twenty-five when he became king; he reigned eleven years in Jerusalem, doing evil in our Father's eyes. ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
6 Nebuchadnezzar king of Babylon marched against him, bound him in bronze chains to take him to Babylon. ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.
7 Nebuchadnezzar also took some of our Father's house articles to Babylon, putting them in his temple in Babylon. ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
8 The rest of Jehoiakim's acts, his detestable things, and the charges against him are written in the Book of Kings of Israel and Judah; his son Jehoiachin reigned in his place. ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
9 Jehoiachin was eight when he became king; he reigned three months and ten days in Jerusalem, doing evil in our Father's eyes. ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
10 In spring, King Nebuchadnezzar brought him to Babylon with the precious articles from our Father's house, making Zedekiah, Jehoiachin's relative, king over Judah and Jerusalem. ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.
11 Zedekiah was twenty-one years old when he became king, and he reigned eleven years in Jerusalem. ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.
12 He did evil in our Father's eyes, not humbling himself before Jeremiah the prophet, who spoke from our Father's mouth. ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13 He also rebelled against King Nebuchadnezzar, who made him swear by our Father, stiffening his neck and hardening his heart, refusing to return to our Father, God of Israel. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
14 All the leading priests and the people grew more and more unfaithful, matching all the nations' detestable practices, and made unclean the house our Father had made holy in Jerusalem. ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
15 Our Father, the God of their fathers, sent word repeatedly through his messengers, pitying his people and his dwelling place. ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.
16 But they mocked our Father's messengers, despised his words, mocked his prophets, until our Father's anger rose against his people, past remedy. ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.
17 So he brought Chaldea's king against them, who killed their young men with the sword in their sanctuary, sparing no young man, virgin, elder, or aged. Our Father gave them all into his hand. ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.
18 All the articles of our Father's house, great and small, the treasures of our Father's house and of the king and his officials—all he brought to Babylon. ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.
19 They burned the house of our Father, tore down Jerusalem's wall, burned all its palaces, destroyed everything valuable in it. ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.
20 He exiled the sword's survivors to Babylon; they served him and his sons until Persia's kingdom began to reign, ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21 to fulfill our Father's word through Jeremiah: until the land enjoyed its sabbaths, all its desolate days it rested, fulfilling seventy years. ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.
22 In Cyrus king of Persia's first year, to fulfill our Father's word through Jeremiah, our Father stirred Cyrus king of Persia's spirit to proclaim throughout all his kingdom, and to put it in writing: ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,
23 Cyrus king of Persia says: "The LORD, God of heaven, gave me all earth's kingdoms and charged me to build him a house in Jerusalem, in Judah. Any of his people among you—may the LORD his God be with him—let him go up." “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]