Skip to content
The Believer's Library

Biblica® Open Kannada Contemporary Version 2022

2 Chronicles 4 OKCV

Show OKCV only
Verse × ×
1 He made a bronze altar thirty feet long, thirty feet wide, and fifteen feet high. ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.
2 He made the cast-metal Sea, round: fifteen feet across, seven and a half high, forty-five around. ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;
3 Below the rim, figures of oxen encircled it, about seven to every foot around the Sea, cast in two rows as one piece with it. ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು.
4 The Sea stood on twelve oxen, three facing north, three west, three south, three east, resting on them, their hindquarters all inward. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು.
5 About three inches thick, its rim like a cup's, like a lily's flower, holding about 17,000 gallons. ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
6 He made ten washing basins, five south, five north, to rinse what was used for the burnt offerings; the Sea was for the priests to wash in. ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.
7 He made ten gold lampstands as specified, five for the temple's south side, five for the north. ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.
8 He made ten tables, placed them in the temple—five south, five north—and one hundred gold basins. ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.
9 He made the priests' court, the great court, its doors, and plated their doors with bronze. ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.
10 He placed the Sea on the south side, at the southeast corner. ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
11 Huram made the pots, shovels, and basins. So Huram finished the work he did for King Solomon in the house of our Father: ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:
12 the two pillars; the two bowl-shaped capitals atop the pillars; the two networks covering those capitals; ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.
13 400 pomegranates for the two networks, two rows each, covering the two capital bowls on the pillars; ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು.
14 the stands and the basins on the stands; ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು.
15 the one Sea and the twelve oxen beneath it. ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು,
16 Pots, shovels, meat forks, and all their utensils—Huram-abi made these for King Solomon, for our Father's house, of polished bronze. ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.
17 The king had them cast in clay molds in the Jordan plain between Succoth and Zeredah. ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.
18 Solomon made all these items in such quantity that the bronze weight could not be determined. ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.
19 Solomon made all the furnishings for our Father's house: the golden altar and tables with the bread of the Presence. ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು,
20 The pure gold lampstands with their lamps, to burn before the inner sanctuary as prescribed; ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,
21 the gold flowers, lamps, and tongs (these were of the purest gold). ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
22 Pure gold: the wick trimmers, sprinkling bowls, dishes, censers, and the temple's doorways—inner doors to the Most Holy Place, and the main hall's doors. ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]