Skip to content
The Believer's Library

Biblica® Open Kannada Contemporary Version 2022

2 Chronicles 5 OKCV

Show OKCV only
Verse × ×
1 Solomon completed all the work for the house of our Father. He then brought in his father David's dedicated things—silver, gold, all the vessels—and put them in the storerooms of the house of our Father. ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.
2 Solomon then gathered Israel's elders, all tribal heads, and leaders of Israel's ancestral families in Jerusalem, to bring up the ark of the covenant of our Father from the City of David, also called Zion. ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
3 So all the men of Israel gathered before the king at the feast in the seventh month. ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು.
4 When all the elders of Israel had come, the Levites took up the ark. ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.
5 The priests and Levites brought up the ark, the tent of meeting, and all the holy vessels in it. ಒಡಂಬಡಿಕೆಯ ಮಂಜೂಷವನ್ನೂ, ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರಾದ ಲೇವಿಯರು ಹೊತ್ತುಕೊಂಡು ತಂದರು.
6 King Solomon and all Israel's assembly who had gathered before him stood before the ark, sacrificing sheep and cattle too many to count or number. ಆಗ ಅರಸನಾದ ಸೊಲೊಮೋನನೂ ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ, ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.
7 The priests brought our Father's covenant ark to its place, the house's inner sanctuary, the Most Holy Place, beneath the cherubim's wings. ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.
8 For the cherubim spread their wings over the ark's place, covering it and its poles from above. ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.
9 The poles were long enough that their ends showed from the ark before the inner sanctuary, but not outside; they remain there to this day. ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.
10 The ark held nothing but the two tablets Moses placed there at Horeb, where our Father made a covenant with the Israelites when they left Egypt. ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
11 Then the priests left the holy place. (All priests present had made themselves holy, regardless of their divisions, ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.
12 and all the Levite singers—Asaph, Heman, Jeduthun, their sons and relatives—stood east of the altar in fine linen, playing cymbals, harps, and lyres, with 120 priests blowing trumpets.). ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.
13 The trumpeters and singers, united, praised and thanked our Father with one voice—raising their voices with the trumpets, cymbals, and instruments, they praised him: "He is good; his covenant love endures forever." Then a cloud filled our Father's house, ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.
14 so the priests couldn't stand to serve because of the cloud, for the glory of our Father filled the house of our Father. ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]