Skip to content
The Believer's Library

Biblica® Open Kannada Contemporary Version 2022

2 Chronicles 6 OKCV

Show OKCV only
Verse × ×
1 Then Solomon said, "Our Father has said that he would dwell in thick darkness. ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ;
2 But I have built you an exalted house, a place for you to dwell in forever." ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದನು.
3 Then the king turned and blessed the whole assembly of Israel as they all stood. ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.
4 He said, "Praise our Father, the God of Israel, whose hand has fulfilled what his mouth promised my father David, saying, ನಂತರ ಅರಸನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು.
5 'Since the day I brought my people out of Egypt, I chose no city from all the tribes of Israel to build a house for my name to be there, nor any man to rule my people Israel. ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.
6 But I chose Jerusalem for my name to be there, and I chose David to lead my people Israel.' ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.
7 David my father had it in his heart to build a house for the name of our Father, the God of Israel. “ಆದಕಾರಣ ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,
8 But our Father told David my father, 'Because building a house for my name was in your heart, you did well to intend this. ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.
9 But you will not build the house; your son, from your own body—he will build the house for my name.' ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.
10 Now our Father has fulfilled the word he spoke: I have succeeded David my father and sit on Israel's throne, as he promised, and I have built the house for the name of our Father, the God of Israel. “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ, ಯೆಹೋವ ದೇವರು ಮಾತುಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.
11 There I placed the ark, holding the covenant our Father made with the people of Israel." ಯೆಹೋವ ದೇವರು ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ,” ಎಂದನು.
12 Then Solomon stood before our Father's altar in the presence of the whole assembly of Israel and spread out his hands. ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಪ್ರಾರ್ಥನೆಗಾಗಿ ತನ್ನ ಕೈಗಳನ್ನು ಚಾಚಿದನು.
13 Solomon had made a bronze platform about seven and a half feet long, seven and a half feet wide, four and a half feet high, and set it in the middle of the court. He stood on it, knelt before the whole assembly of Israel, and spread his hands toward heaven. ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,
14 He said, O my Father, God of Israel, no Father is like you in heaven or on earth, keeping covenant and showing loyal love to your servants who walk before you wholeheartedly. ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.
15 You kept your promise to your servant David my father; what you spoke with your mouth you fulfilled with your hand today. ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.
16 So now, my Father, God of Israel, keep for your servant David my father what you promised: "You will never lack a man before me on Israel's throne, if only your sons watch their way to walk in my law, as you have walked before me." “ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.
17 And now, my Father, God of Israel, let the word you spoke to your servant David be confirmed. ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.
18 But will our Father really live with people on earth? The heavens and highest heavens can't hold you—how much less this house I built. “ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?
19 Yet hear the prayer of your servant and his plea, O my Father, and hear the cry and prayer your servant prays before you. ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.
20 May your eyes be open toward this house day and night, toward the place where you said you'd put your name, to hear the prayer your servant prays toward this place. ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.
21 Hear your servant's and your people Israel's pleas when they pray toward this place. Hear from heaven, your dwelling; and when you hear, forgive. ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.
22 If a man sins against his neighbor and must swear an oath, and he comes and swears his oath before your altar in this house, “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,
23 then hear from heaven and act. Judge your servants: pay back the guilty for their deeds, and clear the righteous, rewarding them by their righteousness. ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.
24 If your people Israel, defeated by enemies for sinning against you, turn back to praise your name, pray, and plead with you in this house, “ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,
25 then hear from heaven, forgive the sin of your people Israel, and bring them back to the land you gave to them and their ancestors. ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.
26 When the sky is shut with no rain because they sinned against you, if they pray toward this place, praise your name, and turn from their sin when you make them suffer, “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,
27 then hear from heaven, forgive your servants' sin, your people Israel, when you teach them the good path to walk, and send rain on your land, which you gave your people as their inheritance. ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.
28 If famine, plague, blight, mildew, locust, or caterpillar strikes the land; if enemies besiege them in their towns—whatever plague or sickness comes, “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,
29 whatever prayer or plea anyone or all your people Israel makes, each knowing his own suffering and pain and spreading his hands toward this house, ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತಾನು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,
30 then hear from heaven, your home, and forgive, and repay each according to all his ways, since you know his heart—for you alone know every human heart, ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.
31 so they may fear you and walk in your ways as long as they live on the land you gave our ancestors. ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು.
32 Also, when a foreigner not of your people Israel comes from a distant land for your great name, your mighty hand, and your outstretched arm—when they come and pray toward this house, “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ಮಹಾನಾಮದ ನಿಮಿತ್ತ ದೂರದೇಶದಿಂದ ಬಂದ ಒಬ್ಬ ಪರದೇಶಿಯು, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,
33 then hear from heaven where you live, and do all the foreigner asks, so all the earth's peoples may know your name and fear you, as your people Israel do, and know this house I built bears your name. ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.
34 If your people go to war against their enemies wherever you send them, and pray to you toward this city you have chosen and the house I built for your name, “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,
35 then hear from heaven their prayer and their plea, and uphold their cause. ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.
36 If they sin against you—for no one is without sin—and you are angry with them and hand them to an enemy who takes them captive to a land far or near, “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,
37 yet if in the land of their captivity they take it to heart, and turn back and plead with you there, saying, "We have sinned, we did wrong, we acted evilly," ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿ,
38 if they turn back to you with all their heart and soul in the land of their captivity where they were taken, and pray toward their land you gave their ancestors, the city you chose, and the house I built for your name, ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,
39 then hear from heaven, your dwelling place, their prayer and pleas, uphold their cause, and forgive your people who sinned against you. ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ, ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಕ್ಷಮಿಸಿರಿ.
40 Now, my Father, let your eyes be open and your ears attentive to the prayer of this place. “ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.
41 And now arise, my Father, and come to your resting place, you and the ark of your might. Let your priests, my Father, be clothed with salvation, and let your faithful ones rejoice in your goodness. “ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.
42 My Father, do not reject your anointed one. Remember your covenant love for David your servant. ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]