Skip to content
The Believer's Library

Biblica® Open Kannada Contemporary Version 2022

2 Chronicles 7 OKCV

Show OKCV only
Verse × ×
1 When Solomon finished praying, fire fell from heaven and consumed the burnt offering and sacrifices, and our Father's glory filled the house. ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.
2 The priests couldn't enter our Father's house, because our Father's glory filled it. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.
3 When all the Israelites saw the fire fall and our Father's glory on the house, they knelt, faces to the ground on the pavement, worshiping and thanking our Father: "He is good; his faithful love endures forever." ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
4 Then the king and all the people offered sacrifices before our Father. ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.
5 King Solomon sacrificed 22,000 oxen and 120,000 sheep; the king and all the people dedicated the house of our Father. ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.
6 The priests stood at their posts; the Levites stood with the musical instruments for our Father that King David made for giving thanks to our Father—"for his faithful love endures forever"—whenever David praised through the instruments. Opposite them the priests blew the trumpets, and all Israel stood. ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.
7 Solomon dedicated the courtyard's middle, in front of our Father's house, for there he offered the burnt offerings and fat of the peace offerings, since the bronze altar he had made could not hold the burnt offering, grain offering, and fat. ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
8 At that time Solomon kept the feast seven days, and all Israel with him—a vast assembly—from Lebo-hamath to the Brook of Egypt. ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.
9 On the eighth day they held a closing assembly, having kept the altar's dedication seven days and the feast seven days. ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.
10 On the twenty-third day of the seventh month, he sent the people home, joyful and glad at heart for the goodness our Father showed to David, to Solomon, and to Israel his people. ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.
11 Solomon finished the house of our Father and the royal palace. Everything Solomon set his heart to do in the house of our Father and his own house, he did successfully. ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.
12 Then our Father appeared to Solomon at night and said to him: "I have heard your prayer and chosen this place for myself as a house of sacrifice. ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.
13 "If I shut the skies so no rain falls, or command locusts to devour the land, or send a plague among my children, “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,
14 if my children—who bear my name—humble themselves, pray, seek my face, and turn from their evil ways, I will hear from heaven, forgive their sin, and heal their land. ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
15 Now my eyes will be open and my ears attentive to the prayer offered in this place. ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.
16 Now I have chosen and dedicated this house, so my name remains there forever; my eyes and heart will be there always. ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
17 As for you—if you walk before me as David your father walked, doing all I commanded you and keeping my statutes and judgments, “ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
18 then I will confirm your kingdom's throne, as I covenanted with David your father: "A man of yours will always rule over Israel." ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
19 But if you turn away, abandon my statutes and commands I set before you, and go serve other gods and worship them, “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,
20 then I will uproot Israel from my land I gave them, cast from my sight this temple I set apart for my name, and make it an example and taunt among all peoples. ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.
21 This house, once so exalted, will leave everyone who passes by appalled, saying, "Why did the LORD do this to this land and this house? ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
22 They will answer, "Because they abandoned the LORD, God of their ancestors, who brought them out of the land of Egypt, and clung to other gods, bowing and serving them—that's why he brought all this disaster on them." ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]