Skip to content
The Believer's Library

Biblica® Open Kannada Contemporary Version 2022

2 Chronicles 8 OKCV

Show OKCV only
Verse × ×
1 After twenty years, in which Solomon built the house of our Father and his own palace, ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ,
2 Solomon rebuilt the cities that Huram had given him, and settled the people of Israel in them. ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
3 Then Solomon marched against Hamath-zobah and overpowered it. ಸೊಲೊಮೋನನು ಹಮಾತ್ ಚೋಬವನ್ನು ವಶಪಡಿಸಿಕೊಂಡನು.
4 He built Tadmor in the wilderness, along with all the storage cities he built in Hamath. ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
5 He also rebuilt Upper Beth-horon and Lower Beth-horon as fortified cities, with walls, gates, and bars, ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.
6 Baalath, all Solomon's supply cities, his chariot and horsemen cities, and all he desired to build in Jerusalem, Lebanon, and his whole realm. ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
7 There were still people left from the Hittites, Amorites, Perizzites, Hivites, and Jebusites, who were not Israelites. ಸೊಲೊಮೋನನು ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ
8 Their descendants still living in the land, whom Israel had not destroyed, Solomon conscripted for forced labor, as they still are today. ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.
9 Solomon enslaved no Israelites for his work; they were soldiers, commanders of his officers, and commanders of his chariots and horsemen. ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಆದರೆ ಅವರು ಯುದ್ಧಭಟರಾಗಿಯೂ, ಅಧಿಪತಿಗಳಲ್ಲಿ ಪ್ರಧಾನರಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇರುವಂತೆ ಮಾಡಿದನು.
10 These were King Solomon's chief officers: 250 who supervised the people. ಇವರು ಅರಸನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನರಾಗಿದ್ದರು, ಇವರು ಇನ್ನೂರೈವತ್ತು ಮಂದಿ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.
11 Solomon brought Pharaoh's daughter from the City of David to the house he built her, saying, "No wife of mine will live in David king of Israel's house, for holy is wherever our Father's ark has entered." ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.
12 Then Solomon offered burnt offerings to our Father on the altar he built before the portico, ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.
13 daily as required, by Moses' command: Sabbaths, New Moons, and three yearly festivals—the Feast of Unleavened Bread, the Feast of Weeks, and the Feast of Tabernacles. ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
14 Following his father David's rules, he set priestly divisions for service, Levite divisions to praise and serve before the priests as each day required, and gatekeeper divisions at each gate, for David the man of our Father had commanded it. ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
15 They followed the king's orders to the priests and Levites exactly, down to the storerooms. ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.
16 All Solomon's work was finished, from the day our Father's house was founded until its completion; our Father's house was complete. ಯೆಹೋವ ದೇವರ ಆಲಯದ ಅಸ್ತಿವಾರ ಹಾಕಿದ ದಿವಸದವರೆಗೂ ಅದನ್ನು ಕಟ್ಟಿಸಿ ತೀರಿಸುವವರೆಗೂ ಸೊಲೊಮೋನನ ಕೆಲಸವೆಲ್ಲಾ ಮುಗಿದು, ಯೆಹೋವ ದೇವರ ಆಲಯವು ಸಿದ್ಧವಾಯಿತು.
17 Then Solomon went to Ezion-geber and Eloth on the seacoast in the land of Edom. ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದ ಬಳಿಯಲ್ಲಿರುವ ಎಚ್ಯೋನ್ ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೊರಟುಹೋದನು.
18 Huram sent him ships by his servants, with sailors who knew the sea; they sailed with Solomon's servants to Ophir, took about seventeen tons of gold, and brought it to King Solomon. ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]