Skip to content
The Believer's Library

Biblica® Open Kannada Contemporary Version 2022

2 Chronicles 9 OKCV

Show OKCV only
Verse × ×
1 Hearing Solomon's fame, the queen of Sheba came to Jerusalem to test him with hard questions—a huge retinue, camels bearing spices, much gold, precious stones. Reaching Solomon, she told him all on her mind. ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
2 Solomon answered all her questions; nothing was too hard for him to explain to her. ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.
3 When the queen of Sheba had seen the wisdom of Solomon, and the palace he had built, ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,
4 the food on his table, his officials seated, his servants attending, their clothing, his cupbearers and theirs, and the burnt offerings at the house of our Father—it took her breath away. ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.
5 She told the king, "The report I heard in my own land about your words and your wisdom was true. ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.
6 I didn't believe the reports until I came and saw for myself. Not half the greatness of your wisdom was told me; you surpass the report I heard. ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.
7 How happy your people! How happy these servants who stand before you always, hearing your wisdom! ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.
8 Blessed be the LORD your God, who delighted in you and set you on his throne as king for the LORD your God! Because your God loved Israel, establishing them forever, he made you king to do justice and righteousness." ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.
9 She gave the king about 9,000 pounds of gold, great quantities of spices, and precious stones. No spice ever matched what the queen of Sheba gave King Solomon. ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ.
10 Huram's and Solomon's servants, who brought gold from Ophir, also brought sandalwood and precious stones. ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.
11 From the sandalwood the king made steps for our Father's house and his palace, and lyres and harps for the singers—none like them ever seen in Judah. ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.
12 King Solomon gave the queen of Sheba all she desired, whatever she asked, more than she had brought him. Then she returned to her own land with her servants. ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.
13 The weight of gold that came to Solomon in a single year was about twenty-five tons, ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.
14 besides what traders and merchants brought; all the kings of Arabia and governors of the land brought gold and silver to Solomon. ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.
15 King Solomon made 200 large shields of hammered gold, each with about fifteen pounds of gold. ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.
16 He made 300 smaller shields of hammered gold, about seven and a half pounds each. The king put them in the House of the Forest of Lebanon. ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
17 The king made a large ivory throne and covered it with pure gold. ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.
18 The throne had six steps with a gold footstool attached to it; armrests flanked the seat, with two lions standing beside them, ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
19 and twelve lions stood there, one at either end of each of the six steps. Nothing like it was ever made for any kingdom. ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.
20 All King Solomon's cups were gold, and every vessel of the House of the Forest of Lebanon was pure gold. Silver counted as nothing in Solomon's days, ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.
21 for the king's ships sailed to Tarshish with Huram's servants; every three years the Tarshish ships returned with gold, silver, ivory, apes, and peacocks. ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.
22 So King Solomon surpassed all the kings of the earth in riches and wisdom. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.
23 All the kings of the earth sought Solomon's presence to hear the wisdom our Father put in his heart. ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.
24 Each brought his gift—silver and gold articles, garments, weapons, spices, horses, and mules—year after year. ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.
25 Solomon had 4,000 horse-and-chariot stalls and 12,000 horsemen, kept in the chariot cities and with the king in Jerusalem. ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
26 He ruled all the kings from the Euphrates to the land of the Philistines, to Egypt's border. ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.
27 The king made silver in Jerusalem like stones, and cedar as plentiful as foothill sycamore-figs. ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
28 Horses were imported for Solomon from Egypt and from all the lands. ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.
29 Solomon's other deeds, first to last—aren't they recorded in the words of Nathan the prophet, Ahijah of Shiloh's prophecy, and the visions of Iddo the seer about Jeroboam son of Nebat? ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.
30 Solomon reigned in Jerusalem over all Israel forty years. ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.
31 Solomon rested with his ancestors, buried in the city of David his father. His son Rehoboam reigned in his place. ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]