Skip to content
The Believer's Library

Biblica® Open Kannada Contemporary Version 2022

2 Peter 1 OKCV

Show OKCV only
Verse × ×
1 Simon Peter, servant and apostle of Jesus Christ, to those given a faith as precious as ours through the righteousness of our God and Savior Jesus Christ: ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:
2 May grace and peace be multiplied to you through knowing our Father and Jesus our Lord. ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3 His divine power gave us all we need for life and devotion to God, through knowing him who called us by his glory and excellence. ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.
4 Through these he gave us his precious and very great promises, so that through them you may share the divine nature, having escaped the world's corruption from evil desires. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.
5 So, making every effort, add goodness to your faith, and to goodness, knowledge; ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
6 to knowledge, self-control; to self-control, endurance; to endurance, devotion to God, ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ
7 to devotion to God, brotherly affection; to brotherly affection, love. ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
8 If you have these qualities, growing, they'll keep you from being useless or fruitless in knowing our Lord Jesus Christ. ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.
9 Whoever lacks these things is blind, shortsighted, forgetting he was cleansed from his past sins. ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.
10 So, brothers and sisters, strive to confirm your calling and election; do these things and you will never stumble. ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.
11 This way you'll be richly given entrance into the eternal kingdom of our Lord and Savior Jesus Christ. ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.
12 So I will always remind you of these things, though you know them and stand firm in the truth you now hold. ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.
13 I think it right to keep stirring you with reminders while I remain in this tent, ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.
14 since I know I'll soon set my tent aside, as our Lord Jesus Christ showed me. ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.
15 I will also strive so you can always recall these things after I depart. ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.
16 For we didn't follow ingenious myths to tell you of our Lord Jesus Christ's power and coming—we were eyewitnesses of his majesty. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.
17 He received honor and glory from our Father when a voice came to him from the Majestic Glory: "This is my Son, the one I love; I delight in him." ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.
18 We ourselves heard this voice come from heaven, for we were with him on the holy mountain. ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
19 We also have the prophetic word made more certain—you do well to attend to it, like a lamp shining in a dark place, until day dawns and the morning star rises in your hearts. ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.
20 Above all, you must understand that no prophecy of Scripture comes from one's own interpretation. ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ.
21 No prophecy ever came by human will, but men spoke from our Father, carried along by the Holy Spirit. ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]