Skip to content
The Believer's Library

Biblica® Open Kannada Contemporary Version 2022

2 Peter 2 OKCV

Show OKCV only
Verse × ×
1 False prophets arose among the people, just as false teachers will arise among you. They will secretly bring in destructive heresies, even deny the Master who bought them, and bring swift destruction on themselves. ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.
2 Many will follow their lust, and because of them the way of truth will be slandered. ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3 In their greed they'll exploit you with made-up words. Their judgment, decreed long ago, isn't idle; their ruin isn't asleep. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.
4 For if our Father did not spare angels who sinned, but threw them into the deepest pit of gloom, chained in darkness, kept for judgment; ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.
5 if he didn't spare the ancient world, but protected Noah, an announcer of righteousness, with seven others, when he brought a flood on the wicked world; ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.
6 and if he condemned Sodom and Gomorrah, reducing their cities to ashes, as an example of what awaits the wicked; ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.
7 and if he rescued righteous Lot, worn out by the shameless behavior of lawless people. ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.
8 That righteous man, living among them, was tormented day after day in his righteous soul by the lawless deeds he saw and heard, ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9 then our Father knows how to rescue the godly from trials, and keep the wicked under punishment until judgment day. ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.
10 Especially those chasing flesh's corrupt desires and despising authority—bold, arrogant, unafraid to slander celestial beings. ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.
11 Whereas angels, greater in strength and power, don't bring a slanderous judgment against them before our Father. ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.
12 But these people, like unreasoning animals born by instinct to be caught and destroyed, insult what they don't understand, and will be destroyed in their destruction, ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.
13 suffering wrong as pay for wrongdoing. They count it a pleasure to revel in broad daylight. They are stains and flaws, reveling in their deceptions while feasting with you. ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.
14 Their eyes are full of adultery, never stopping from sin, luring unstable souls, hearts trained in greed—cursed children! ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
15 Abandoning the straight path, they went astray, following the way of Balaam son of Beor, who loved the wages of wrongdoing. ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
16 But he was corrected for his own wrongdoing: a mute donkey spoke with a human voice and stopped the prophet's madness. ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.
17 These are dry springs, storm-driven mists—thick darkness is kept for them. ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.
18 With inflated, empty words they lure through the sensual desires of the flesh those barely escaping from people living in error. ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.
19 They promise them freedom, while themselves enslaved to corruption—for whatever overcomes a person enslaves them. ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.
20 For if, having escaped the world's corruption through knowing our Lord and Savior Jesus Christ, they are entangled in it again and overcome, their end is worse than their start. ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21 It would have been better for them never to know the way of righteousness than to know it and turn back from the holy commandment given to them. ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.
22 The true proverb has happened to them: "A dog returns to its vomit," and "A washed sow returns to wallow in mud." “ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]