Skip to content
The Believer's Library

Biblica® Open Kannada Contemporary Version 2022

2 Peter 3 OKCV

Show OKCV only
Verse × ×
1 Beloved, this is now the second letter I write you; in both I stir up your sincere mind by reminder. ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.
2 Remember the words the holy prophets spoke beforehand, and the command of our Lord and Savior given through your apostles. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.
3 Know this first: mockers will come in the last days, mocking, following their own lusts. ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,
4 They will ask, "Where is his promised coming? Since the fathers fell asleep, everything continues as it has since creation's beginning." “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.
5 They willfully ignore this: long ago, by our Father's word, heavens existed, and earth formed out of water and through water, ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.
6 and through these the world of that time was deluged with water and perished. ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.
7 By the same word, today's heavens and earth are stored up for fire, kept for the day of judgment and destruction of the wicked. ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.
8 Don't overlook this, loved ones: with our Father, one day is like 1,000 years, and 1,000 years like one day. ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
9 Our Father isn't slow to keep his promise, as some think; he's patient with you, wanting no one to perish, but all to reach repentance. ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
10 But the day of our Lord Jesus will come like a thief: the heavens will vanish with a rushing sound, the elements will burn and melt, and the earth with all its works will be exposed. ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
11 Since all this will dissolve, what sort of people should you be? You should live holy lives, devoted to God, ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
12 as you wait for and hasten the coming of our Father's day, when the heavens will be set ablaze and dissolved, and the elements melt in the heat. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
13 But as he promised, we wait for new heavens and a new earth, where righteousness lives. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
14 So, beloved, awaiting these things, strive to be found by him in peace, spotless and without defect. ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.
15 Regard our Lord's patience as salvation, just as our beloved brother Paul wrote you, with the wisdom given him, ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
16 as in all his letters, where he speaks about these things. Some parts are hard to understand, and the ignorant and unstable twist them—as they do the other Scriptures—to their own destruction. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.
17 So then, loved ones, knowing this in advance, guard yourselves, so you aren't swept away by the error of lawless people and lose your own firm standing. ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.
18 Grow in the grace and knowledge of our Lord and Savior Jesus Christ. To him be glory, now and to the day of eternity. Amen. ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]