Skip to content
The Believer's Library

Biblica® Open Kannada Contemporary Version 2022

2 Samuel 1 OKCV

Show OKCV only
Verse × ×
1 After the death of Saul, David returned from defeating the Amalekites and stayed in Ziklag two days. ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,
2 On the third day a man came from Saul's camp, clothes torn, dirt on his head. Reaching David, he fell to the ground and bowed. ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.
3 David asked him, "Where have you come from?" "I escaped from the camp of Israel," he replied. ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅದಕ್ಕವನು, “ಇಸ್ರಾಯೇಲಿನ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು,” ಎಂದನು.
4 "What happened?" David asked. "Tell me." He said, "The people fled the battle. Many fell and died. Saul and his son Jonathan are dead too." ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.
5 David asked the young man who brought the news, "How do you know Saul and his son Jonathan are dead?" ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು.
6 The young man said, "I happened onto Mount Gilboa, and there was Saul, leaning on his spear, the chariots and horsemen bearing down on him. ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
7 He turned around, saw me, and called to me. I said, 'Here I am.' ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು.
8 He asked me, 'Who are you?' I told him, 'I am an Amalekite.' “ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು.
9 He said to me, 'Stand over me and kill me; anguish has seized me, but I'm still alive.' “ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.
10 So I stood over him and killed him, since I knew he wouldn't survive his fall. Then I took the crown from his head and the band on his arm, and brought them here to my lord." “ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.
11 Then David grabbed his own clothes and tore them, and so did all the men with him. ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,
12 They mourned, wept, and fasted until evening for Saul, his son Jonathan, our Father's people, and the house of Israel, because they had fallen by the sword. ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು.
13 David asked the young man who brought the news, "Where are you from?" He said, "I'm the son of a foreigner, an Amalekite." ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು.
14 David said, "How were you not afraid to raise your hand to kill our Father's anointed?" ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.
15 David called one of his young men and said, "Go, strike him down." He struck him, and he died. ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.
16 David had said to him, "Your blood is on your own head, for your own mouth testified against you when you said, 'I killed our Father's anointed.'" ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.
17 Then David sang this lament over Saul and his son Jonathan, ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು.
18 and ordered the people of Judah taught this lament, called The Bow; it is written in the Book of Jashar: ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:
19 "Your glory, Israel, lies slain on your heights. How the mighty have fallen! “ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ. ಪರಾಕ್ರಮಶಾಲಿಗಳು ಹೇಗೆ ಬಿದ್ದರು!
20 Don't tell it in Gath, don't proclaim it in the streets of Ashkelon, or the daughters of the Philistines will rejoice, the daughters of the uncircumcised will exult. “ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.
21 Mountains of Gilboa, may you have no dew or rain, no fields yielding offerings. For there the shield of the mighty was defiled, the shield of Saul, no longer rubbed with oil. “ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.
22 From the blood of the slain, from the flesh of the mighty, the bow of Jonathan did not turn back, the sword of Saul did not return unsatisfied. “ಹತರಾದವರ ರಕ್ತದಿಂದಲೂ, ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ. ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ.
23 Saul and Jonathan, beloved and cherished in life, in death they were not parted. They were swifter than eagles, stronger than lions. ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.
24 Daughters of Israel, weep for Saul, who clothed you in scarlet and finery, who adorned your garments with ornaments of gold. “ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
25 How the mighty have fallen in the thick of battle! Jonathan lies slain on your heights. “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯೋನಾತಾನನೇ, ನೀನು ಉನ್ನತ ಸ್ಥಳಗಳಲ್ಲಿ ಹತನಾಗಿ ಬಿದ್ದಿರುವಿ.
26 I grieve for you, my brother Jonathan; you were very dear to me. Your love for me was wonderful, surpassing the love of women. ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.
27 How the mighty have fallen! The weapons of war have perished." “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]