Skip to content
The Believer's Library

Biblica® Open Kannada Contemporary Version 2022

2 Samuel 2 OKCV

Show OKCV only
Verse × ×
1 Later, David inquired of our Father, "Should I go up to one of the cities of Judah?" Our Father said, "Go up." David said, "Where?" "Hebron," he said. ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.
2 David went up there with his two wives, Ahinoam of Jezreel and Abigail, Nabal the Carmelite's widow. ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು.
3 David brought up his men who were with him, each with his household, and they settled in Hebron's towns. ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.
4 Then Judah's men came and anointed David king over Judah's house there. They told David that Jabesh-gilead's men had buried Saul. ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,
5 He sent messengers to the men of Jabesh-gilead: "May our Father bless you for this kindness to your lord Saul, burying him. ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.
6 Now may our Father show you kindness and faithfulness; I too will treat you well for doing this. ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
7 Be strong and take courage, for your master Saul is dead, and Judah's house has also anointed me king over them." ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.
8 But Abner son of Ner, Saul's army commander, took Ish-bosheth son of Saul and brought him across to Mahanaim. ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.
9 He made him king over Gilead, over the Ashurites, over Jezreel, over Ephraim, over Benjamin—over all Israel. ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.
10 Ish-bosheth son of Saul was forty when he became king over Israel; he reigned two years. But Judah's house followed David. ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು.
11 David was king in Hebron over the house of Judah for seven years and six months. ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.
12 Abner son of Ner, with Ish-bosheth son of Saul's servants, left Mahanaim for Gibeon. ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.
13 Joab son of Zeruiah and David's servants also went out and met them together at Gibeon's pool—one side sitting on one bank, the other on the opposite bank. ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.
14 Abner said to Joab, "Let the young men get up and compete before us." Joab said, "Let them get up." ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.
15 So they got up and crossed over by count, twelve for Benjamin and Ish-bosheth son of Saul, twelve from David's servants. ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,
16 Each man gripped his opponent's head and drove his sword into his side, and they fell together. So the place in Gibeon was named Helkath-hazzurim. ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.
17 The fighting that day was very fierce; Abner and Israel's men fell before David's servants. ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು.
18 Zeruiah's three sons were there: Joab, Abishai, and Asahel—Asahel as fast-footed as a wild gazelle. ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
19 He chased Abner, turning neither to the right nor to the left as he pursued him. ಅಸಾಯೇಲನು ಅಬ್ನೇರನನ್ನು ಬಲಗಡೆಗಾದರೂ, ಎಡಗಡೆಗಾದರೂ ತಿರುಗದೆ ಬೆನ್ನಟ್ಟಿದನು.
20 Abner looked back and said, "Is that you, Asahel?" "It is," he answered. ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು.
21 Abner told him, "Turn right or left, seize one of the young men, take his gear." But Asahel refused to stop chasing him. ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.
22 Abner told Asahel again, "Turn back. Why force me to strike you down? How could I face your brother Joab?" ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು.
23 He refused to turn aside, so Abner struck him in the stomach with the butt of his spear; it came out through his back. He fell there and died on the spot. Everyone who came to where Asahel had fallen and died stood still. ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
24 Joab and Abishai pursued Abner; at sunset they reached the hill of Ammah, near Giah on the way to the wilderness of Gibeon. ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು.
25 Benjamin's men gathered behind Abner, formed one band, and stood atop a hill. ಆಗ ಅಬ್ನೇರನ ಹಿಂದೆ ಬೆನ್ಯಾಮೀನನ ಜನರು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು, ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
26 Abner called to Joab: "Must the sword devour forever? Don't you know this will end bitterly? How long until you tell the people to turn back from chasing their brothers?" ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.
27 Joab said, "As surely as our Father lives, if you had not spoken, the people would have kept pursuing their brothers until morning." ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.
28 Joab blew the trumpet; all the troops stopped, no longer pursuing Israel or fighting. ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.
29 Abner and his men marched through the Arabah all that night, crossed the Jordan, went through all Bithron, and reached Mahanaim. ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು.
30 Joab turned back from chasing Abner, gathered all the troops, and found nineteen of David's men missing, besides Asahel. ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು.
31 But David's servants struck down 360 of the men of Benjamin who were with Abner. ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.
32 They carried Asahel, buried him in his father's tomb in Bethlehem; Joab and his men walked all night, reaching Hebron by dawn. ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]