Skip to content
The Believer's Library

Biblica® Open Kannada Contemporary Version 2022

2 Samuel 3 OKCV

Show OKCV only
Verse × ×
1 The war between Saul's house and the house of David dragged on a long time. David grew steadily stronger, while Saul's house grew weaker and weaker. ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.
2 Sons were born to David in Hebron. His firstborn was Amnon, whose mother was Ahinoam of Jezreel; ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು;
3 his second, Chileab, by Abigail, Nabal of Carmel's widow; the third, Absalom, son of Maacah, daughter of Talmai king of Geshur; ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;
4 the fourth, Adonijah son of Haggith; the fifth, Shephatiah son of Abital; ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು; ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು;
5 and the sixth, Ithream, by David's wife Eglah. These were David's sons born in Hebron. ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. ಇವರು ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು.
6 During the war between the house of Saul and the house of David, Abner kept strengthening his position in Saul's house. ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು.
7 Saul had a concubine named Rizpah, daughter of Aiah. Ish-bosheth said to Abner, "Why did you sleep with my father's concubine?" ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.
8 Abner, very angry at Ish-bosheth's words, said, "Am I a dog's head loyal to Judah? Today I keep showing loyalty to your father Saul's house, his brothers and friends, and haven't handed you to David. Yet now you charge me over this woman! ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9 May our Father do the same to Abner, and more, if I do not do for David what our Father swore to him, ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,
10 to transfer the kingdom from Saul's house and set up David's throne over Israel and over Judah, from Dan to Beersheba." ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.
11 And Ish-bosheth could not say another word to Abner, because he was afraid of him. ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
12 Abner sent messengers to David on his behalf: "Whose is the land? Make your covenant with me, and my hand will be with you to bring all Israel over to you." ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.
13 David said, "Good; I'll make a covenant with you. But I require one thing: you won't see my face unless you first bring Michal, Saul's daughter, when you come." ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.
14 David sent messengers to Ish-bosheth, Saul's son: "Give me my wife Michal, whom I betrothed to me for one hundred Philistine foreskins." ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.
15 So Ish-bosheth sent and took her from her husband, Paltiel son of Laish. ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು.
16 Her husband went with her, weeping as he followed her to Bahurim. Then Abner told him, "Go back." So he returned. ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು.
17 Abner spoke with Israel's elders: "You've long wanted David as king over you. ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ.
18 Now act, for our Father promised David: 'By my servant David's hand I will save my people Israel from the Philistines and all their enemies.'" ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು.
19 Abner also spoke to Benjamin, then went to Hebron to tell David all that Israel and the whole house of Benjamin had agreed to do. ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.
20 When Abner came to David at Hebron with twenty men, David held a feast for Abner and his men. ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
21 Abner told David, "Let me go gather all Israel to my lord the king, so they make a covenant with you and you reign over all your heart desires." So David sent Abner off, and he left in peace. ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
22 Just then David's servants and Joab returned from a raid with much plunder. But Abner was not with David at Hebron, for David had sent him away, and he had gone in peace. ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು.
23 When Joab and all his army arrived, he was told, "Abner son of Ner came to the king, who sent him off, and he left in peace." ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು.
24 So Joab went to the king: "What have you done? Abner came to you—why did you send him off, and now he's gone? ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?
25 You know Abner son of Ner came to deceive you, to learn your movements and everything you're doing." ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.
26 When Joab left David, he sent messengers after Abner, who brought him back from the well of Sirah. But David knew nothing. ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
27 When Abner returned to Hebron, Joab pulled him aside inside the gate as if to speak privately, and there stabbed him in the stomach. He died—for the blood of Joab's brother Asahel. ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.
28 Later, when David heard, he said, "I and my kingdom are forever innocent before our Father of the blood of Abner son of Ner. ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.
29 May it fall on Joab's head and all his father's house! May Joab's house never lack someone with a discharge or skin disease, who leans on a crutch, falls by the sword, or lacks food." ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.
30 So Joab and his brother Abishai killed Abner for killing their brother Asahel in the battle at Gibeon. ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
31 David told Joab and all the people with him, "Tear your clothes, put on sackcloth, and mourn before Abner." King David walked behind the bier. ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
32 They buried Abner in Hebron, and the king wept aloud at his grave, and all the people wept. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.
33 The king sang this lament for Abner: "Should Abner have died as a fool dies? ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?
34 Your hands were not bound, your feet not set in chains. You fell as one falls before the wicked." And all the people wept over him again. ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.
35 Then all the people came to urge David to eat something while it was still day, but David swore: "May our Father do so to me, and worse, if I taste bread or anything else before sunset!" ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.
36 All the people noticed and were pleased; everything the king did pleased all the people. ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು.
37 So that day all the people and all Israel knew the king had not willed the death of Abner son of Ner. ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.
38 The king told his servants, "Don't you know a prince and a great man has fallen today in Israel? ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?
39 Today, though the anointed king, I am weak, and these men, Zeruiah's sons, are too hard for me. May our Father repay the one who does evil for his evil." ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]