Skip to content
The Believer's Library

Biblica® Open Kannada Contemporary Version 2022

2 Samuel 7 OKCV

Show OKCV only
Verse × ×
1 When the king had settled in his house, and our Father had given him rest from all his surrounding enemies, ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,
2 the king told Nathan the prophet, "Look now, I live in a house of cedar, but our Father's ark stays in a tent." ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.
3 Nathan told the king, "Go, do all that's in your heart, for our Father is with you." ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
4 But that same night the word of our Father came to Nathan: ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ,
5 "Go tell my servant David: This is what your Father says: 'Are you the one to build me a house to live in? “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?
6 I have not lived in a house since I brought Israel up from Egypt until now, but have moved from place to place with a tent for my dwelling.' ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.
7 Wherever I moved with all Israel, did I ever say a word to any leader I commanded to shepherd my people, 'Why haven't you built me a house of cedar?' ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’
8 Now tell my servant David: This is what the Father of heaven's armies says: 'I took you from the pasture, from following the flock, to rule my people Israel. “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.
9 I was with you wherever you went, and cut off all your enemies before you. I will make your name great, like the greatest on earth. ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
10 I will provide a place for my people Israel and plant them there to live undisturbed in their own place. Violent men will no longer oppress them as before, ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.
11 from when I appointed judges over my people Israel. I will give you rest from all your enemies. Your Father also declares to you that he himself will make you a house. ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.
12 When your days end and you rest with your ancestors, I will raise up your offspring after you, who comes from your own body, and I will establish his kingdom. ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.
13 He will build a house for my name, and I will establish his kingdom's throne forever. ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.
14 I will be his Father, and he will be my son. When he sins, I will discipline him with a human rod, with blows human hands deal, ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.
15 but my covenant love will not leave him, as I removed it from Saul, whom I removed from before you. ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.
16 Your house and your kingdom will endure forever before me; your throne will be established forever.'" ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.
17 Nathan reported to David all these words and this entire vision. ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.
18 Then King David went in and sat before our Father, and said: "Who am I, Sovereign Father, and what is my house, that you brought me this far? ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?
19 As if this were a small thing in your eyes, Sovereign Father, you have also spoken of your servant's house far into the future. Is this your way with all humanity, Sovereign Father? ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ.
20 What more can David say to you? For you know your servant, O Sovereign Father. “ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ,
21 For your word's sake and your own heart, you have done all this greatness, making it known to your servant. ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ.
22 So you are great, Sovereign Father. There is none like you, and no God but you, from all we have heard with our own ears. “ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
23 Who is like your people Israel, the one nation on earth our Father went out to redeem as a people for himself, making a name for himself, doing for you great and awesome things—driving out nations and their gods before your people, whom you redeemed for yourself from Egypt? ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?
24 You made your people Israel your own forever, and you, our Father, became their Father. ದೇವರಾದ ಯೆಹೋವ ದೇವರೇ, ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಇರುವ ಹಾಗೆ ಸ್ಥಿರಪಡಿಸಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.
25 And now, our Father, keep forever the word you spoke about your servant and his house, and do as you promised.' “ಈಗ ದೇವರಾದ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.
26 Your name will be great forever, and people will say, 'The Father of heaven's armies is God over Israel.' The house of your servant David will stand firm before you. ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.
27 For you, Father of heaven's armies, God of Israel, revealed this to your servant: 'I will build you a house.' So your servant found courage to pray this prayer to you. “ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.
28 And now, Sovereign Father, you are God, your words are true, and you promised this good thing to your servant. ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.
29 So now, please bless your servant's house, that it may last forever before you. For you, Sovereign Father, have spoken, and with your blessing your servant's house will be blessed forever." ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]