Skip to content
The Believer's Library

Biblica® Open Kannada Contemporary Version 2022

2 Timothy 2 OKCV

Show OKCV only
Verse × ×
1 So then, my child, draw your strength from the grace that is in Christ Jesus. ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.
2 And what you heard from me in the presence of many witnesses, entrust to faithful people able to teach others too. ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
3 Take your share of suffering like a good soldier of Christ Jesus. ಆದ್ದರಿಂದ ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.
4 No soldier on duty gets tangled in civilian affairs—he wants to please the one who enlisted him. ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.
5 And an athlete is not crowned unless he competes according to the rules. ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.
6 The hard-working farmer ought to be the first to receive a share of the crops. ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.
7 Think over what I am saying, for the Lord will give you understanding in everything. ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.
8 Remember Jesus Christ, risen from the dead, a descendant of David, as told in my gospel, ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.
9 for which I suffer, chained like a criminal. But the word of our Father is not chained! ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10 So I endure everything for the sake of the chosen, so they too may gain the salvation in Christ Jesus, with eternal glory. ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.
11 This saying is trustworthy: If we have died with him, we will also live with him; ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.
12 if we endure, we will also reign with him; if we disown him, he also will disown us; ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.
13 if we are faithless, he remains faithful, for he cannot disown himself. ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.
14 Remind them of these things, and warn them before our Father not to quarrel over words—useless, and ruins those who listen. ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.
15 Do your best to present yourself to our Father approved, a worker unashamed, rightly handling the word of truth. ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
16 But avoid empty, godless chatter; it leads people further into wickedness, ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17 and their talk will spread like gangrene. Among them are Hymenaeus and Philetus, ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
18 who wandered away from the truth, claiming the resurrection already happened, and are undermining some people's faith. ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.
19 Yet our Father's firm foundation stands, sealed: "He knows those who are his," and "Let all who name his name turn from evil." ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.
20 In a large house there are vessels not only of gold and silver, but also of wood and clay—some for honor, some for dishonor. ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.
21 So if anyone purifies himself from these, he becomes a vessel of honor: holy, useful to the Master, ready for every good work. ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.
22 Flee youthful cravings; pursue righteousness, faith, love, and peace with those who call on the Lord from a pure heart. ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.
23 Have nothing to do with foolish, ignorant controversies; you know they breed quarrels. ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.
24 The Lord's servant must not be quarrelsome, but be gentle to all, able to teach, patient when wronged. ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.
25 Gently correcting those who oppose him. Perhaps our Father will grant them repentance to know the truth, ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.
26 and they may sober up, escaping the devil's trap where he has held them captive to do his will. ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]