Skip to content
The Believer's Library

Biblica® Open Kannada Contemporary Version 2022

2 Timothy 3 OKCV

Show OKCV only
Verse × ×
1 But understand this: in the last days there will come times of difficulty. ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ.
2 For people will be self-lovers, money-lovers, boastful, arrogant, abusive, disobedient to parents, ungrateful, unholy. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ
3 Heartless, unforgiving, slanderous, without self-control, brutal, hating what is good, ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ
4 treacherous, reckless, swollen with conceit, lovers of pleasure rather than lovers of our Father. ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ
5 They keep the shape of devotion to God but deny its power—turn from them. ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.
6 For among these are those who slip into homes and trap weak women weighed down with sins, driven by various desires. ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.
7 Always learning but never able to come to a knowledge of the truth. ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.
8 As Jannes and Jambres opposed Moses, these also oppose the truth—minds corrupted, disqualified regarding the faith. ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.
9 But they won't get far, for their foolishness will be clear to all, as with those two men. ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.
10 You, however, have followed my teaching, conduct, purpose, faith, patience, love, endurance, ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,
11 my persecutions and suffering—at Antioch, at Iconium, at Lystra, what persecutions I endured! Yet the Lord rescued me from them all. ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.
12 Indeed, all who desire to live a godly life in Christ Jesus will be persecuted, ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13 while evil people and impostors will go on from bad to worse, deceiving and being deceived. ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.
14 But you—stay with what you learned and became convinced of, knowing from whom you learned it, ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.
15 and that from infancy you have known the sacred writings, able to make you wise for salvation through faith in Christ Jesus. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.
16 All Scripture is breathed out by our Father—useful for teaching, exposing wrong, correcting, and training in right living, ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.
17 so that the person of our Father may be complete, equipped for every good work. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]