Skip to content
The Believer's Library

Biblica® Open Kannada Contemporary Version 2022

2 Timothy 4 OKCV

Show OKCV only
Verse × ×
1 I solemnly charge you before our Father and Christ Jesus, who will judge the living and the dead, by his appearing and his kingdom: ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:
2 Preach the word; stand ready in season and out; correct, rebuke, and encourage, with complete patience and teaching. ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.
3 For a time will come when they won't tolerate sound teaching, but will pile up teachers to fit their own desires, since their ears itch, ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.
4 and will turn their ears away from the truth and wander off into myths. ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.
5 But you: stay clear-headed in everything, endure hardship, do an evangelist's work, fulfill your service. ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.
6 For I am already being poured out like a drink offering; my time to depart has come. ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.
7 I have fought the good fight, I have finished the race, I have kept the faith. ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.
8 Now a crown of righteousness awaits me, which the Lord, the righteous judge, will give me on that day—not only to me but to all who have loved his appearing. ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.
9 Do your best to come to me soon. ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.
10 Demas loved this present world, abandoned me, went to Thessalonica. Crescens went to Galatia, Titus to Dalmatia. ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.
11 Only Luke is with me. Pick up Mark and bring him with you—he's useful to me for service. ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
12 I have sent Tychicus to Ephesus. ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.
13 When you come, bring the coat I left with Carpus at Troas, and the scrolls, especially the parchments. ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
14 Alexander the coppersmith did me great harm; the Lord will repay him according to his deeds. ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.
15 Watch out for him yourself, for he strongly opposed our message. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.
16 No one stood with me at my first defense—all abandoned me. May it not be charged against them. ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.
17 But the Lord stood with me and strengthened me, so through me the message would be fully proclaimed and all nations would hear it. I was rescued from the lion's mouth. ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.
18 The Lord will rescue me from every evil deed and carry me safely into his heavenly kingdom. Glory to him forever and ever. Amen. ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.
19 Greet Prisca and Aquila, and the household of Onesiphorus. ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.
20 Erastus stayed at Corinth, and I left Trophimus, who was ill, at Miletus. ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.
21 Try hard to come before winter. Eubulus, Pudens, Linus, Claudia, and all the brothers and sisters greet you. ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
22 The Lord be with your spirit. Grace be with you all. ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]