Skip to content
The Believer's Library

Biblica® Open Kannada Contemporary Version 2022

3 John 1 OKCV

Show OKCV only
Verse × ×
1 The elder, to the beloved Gaius, whom I love in truth. ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:
2 Beloved, I pray you prosper in every way and stay healthy, as your soul prospers. ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
3 I rejoiced greatly when brothers arrived and testified about your faithfulness to the truth—for you truly are walking in it. ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
4 I have no greater joy than this: to hear that my children are walking in the truth. ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
5 Beloved, you act faithfully in all you do for the brothers, even strangers. ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
6 They testified to your love before the church. Send them on in a way worthy of our Father. ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.
7 For they went out for the sake of the Name, accepting nothing from the Gentiles. ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
8 Therefore we ought to support such people, so that we may be fellow workers for the truth. ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.
9 I wrote something to the church, but Diotrephes, who loves being first among them, does not receive us. ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.
10 So if I come, I'll expose what he's doing—slandering us with malicious words. Not satisfied with that, he refuses to welcome the brothers, stops those who want to, and throws them out of the church. ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.
11 Beloved, don't imitate evil, but good. Whoever does good is from our Father; whoever does evil hasn't seen our Father. ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
12 All speak well of Demetrius, and so does the truth. We testify too, and you know our testimony is true. ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
13 I had much to write to you, but I would rather not write with pen and ink. ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ.
14 I hope to see you soon, and we will talk face to face. ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.
15 Peace to you. The friends send their greetings. Greet each of the friends by name. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನ್ನು ಹೆಸರು ಹೆಸರಾಗಿ ವಂದಿಸು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]