Skip to content
The Believer's Library

Biblica® Open Kannada Contemporary Version 2022

Acts 10 OKCV

Show OKCV only
Verse × ×
1 There was a man in Caesarea named Cornelius, a centurion of what was called the Italian Cohort. ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.
2 He was devout, feared our Father with his whole household, gave many gifts to the people, and prayed to our Father constantly. ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.
3 About three in the afternoon he saw clearly in a vision an angel of our Father come to him and say, "Cornelius." ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು.
4 Staring at him, terrified, he said, "What is it, sir?" The angel replied, "Your prayers and gifts to the poor have risen as a memorial before our Father." ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.
5 Now send men to Joppa and bring a man named Simon, who is called Peter. ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು.
6 He is lodging with a tanner named Simon, whose house is by the sea. ಚರ್ಮಕಾರನಾದ ಸೀಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದಾನೆ. ಆ ಮನೆ ಸಮುದ್ರ ತೀರದಲ್ಲಿದೆ,” ಎಂದು ದೇವದೂತನು ಹೇಳಿದನು.
7 When the angel who spoke to him left, Cornelius called two of his household servants and a devout soldier from among his regular attendants, ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,
8 and after explaining everything to them, he sent them to Joppa. ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
9 The next day, as they journeyed and neared the city, Peter went up on the roof to pray, about noon. ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.
10 He grew hungry and wanted to eat, but while they prepared food, a trance came over him, ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕೆನಿಸಿತು. ಊಟ ಸಿದ್ಧತೆಯಾಗುತ್ತಿದ್ದಾಗ ಅವನು ಧ್ಯಾನ ಪರವಶನಾದನು.
11 and saw heaven opened, and something like a large sheet coming down, lowered by its four corners to the earth. ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.
12 It held all kinds of four-footed animals and reptiles of the earth and birds of the air. ಎಲ್ಲಾ ಜಾತಿಯ ನಾಲ್ಕು ಕಾಲಿನ ಪ್ರಾಣಿಗಳು, ಭೂಮಿಯ ಮೇಲೆ ಹರಿದಾಡುವ ಸರೀಸೃಪಗಳು, ಹಾರಾಡುವ ಪಕ್ಷಿಗಳು ಅದರಲ್ಲಿದ್ದವು.
13 And a voice came to him: "Rise, Peter; kill and eat." ಆಗ, “ಪೇತ್ರನೇ, ಎದ್ದೇಳು, ಕೊಂದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.
14 But Peter said, "Absolutely not, Lord; for I have never eaten anything common or unclean." ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.
15 The voice came to him again, a second time: "What I have made clean, don't call common." ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.
16 This happened three times, and at once the sheet was taken up to heaven. ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು.
17 While Peter was puzzled over what the vision meant, suddenly the men sent by Cornelius, having asked the way to Simon's house, stood at the gate, ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು.
18 and called out to ask whether Simon who was called Peter was lodging there. ಅವರು ಪೇತ್ರನು ಎಂದು ಕರೆಯಲಾಗುವ ಸೀಮೋನ ಅಲ್ಲಿ ಇಳಿದುಕೊಂಡಿರುವನೋ ಎಂದು ವಿಚಾರಿಸಿದರು.
19 As Peter thought about the vision, the Holy Spirit said to him, "Three men are looking for you. ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.
20 Get up, go downstairs, and go with them without hesitation, for I have sent them." ಎದ್ದೇಳು, ಕೆಳಗಿಳಿದು ಹೋಗು. ಅವರ ಜೊತೆಯಲ್ಲಿ ಹೋಗಲು ಹಿಂಜರಿಯಬೇಡ, ನಾನೇ ಅವರನ್ನು ಕಳುಹಿಸಿರುವೆ,” ಎಂದರು.
21 Peter went down to the men and said, "I'm the one you're looking for. Why have you come?" ಪೇತ್ರನು ಕೆಳಗಿಳಿದು ಹೋಗಿ, ಅವರಿಗೆ, “ನೀವು ಹುಡುಕುತ್ತಿರುವವನು ನಾನೇ. ನೀವು ಬಂದಿರುವ ಕಾರಣವೇನು?” ಎಂದು ಕೇಳಿದನು.
22 They said, "Cornelius, a centurion, upright, fears our Father, and respected by the whole Jewish nation, was told by a holy angel to summon you to his house and hear what you have to say." ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.
23 So he invited them in and hosted them. Next day he set out with them, joined by some brothers from Joppa. ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.
24 The next day he entered Caesarea. Cornelius, expecting them, had gathered his relatives and close friends. ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.
25 When Peter entered, Cornelius met him and fell down at his feet and worshiped him. ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು.
26 But Peter lifted him up, saying, "Stand up! I'm a man too." ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದೇಳು, ನಾನೂ ಒಬ್ಬ ಮನುಷ್ಯನೇ,” ಎಂದು ಹೇಳಿದನು.
27 While talking with Cornelius, Peter went in and found many people gathered. ಅವನೊಂದಿಗೆ ಮಾತನಾಡುತ್ತಾ ಪೇತ್ರನು ಮನೆಯೊಳಗೆ ಹೋಗಿ ಅಲ್ಲಿ ಜನರ ದೊಡ್ಡ ಗುಂಪೇ ಇರುವುದನ್ನು ಕಂಡನು.
28 He said to them, "You yourselves know it's unlawful for a Jew to associate with or visit someone of another nation. But our Father showed me I should call no one common or unclean. ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.
29 So, sent for, I came without objection. Now, why did you send for me?" ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು.
30 Cornelius said, "Four days ago at this hour, three in the afternoon, I was praying in my house, and suddenly a man in bright clothing stood before me, ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.
31 and said, 'Cornelius, your prayer was heard and your gifts to the poor remembered before our Father. ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.
32 So send to Joppa and call for Simon, known as Peter. He's staying in Simon the tanner's house, by the sea.' ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.
33 So I sent for you at once, and you did well to come. Now we're all here before God, to hear all the Lord has commanded you." ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.
34 Peter spoke up: "I truly see our Father shows no favoritism, ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.
35 but in every nation anyone who fears him and does what is right is acceptable to him. ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.
36 He sent his word to the Israelites, announcing good news of peace through Jesus Christ—he is Lord of all. ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.
37 You yourselves know what happened throughout all Judea, beginning from Galilee after the baptism that John proclaimed: ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ.
38 how our Father anointed Jesus of Nazareth with the Holy Spirit and power, how he went about doing good and healing all oppressed by the devil, for our Father was with him. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.
39 We are witnesses of all he did in the Jews' land and Jerusalem—they killed him, hanging him on a tree, “ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,
40 but our Father raised him on the third day and made him appear, ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು.
41 not to all the people but to us, witnesses whom our Father chose beforehand, who ate and drank with him after he rose from the dead. ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.
42 He commanded us to preach to the people and testify: our Father appointed him judge of the living and the dead. ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.
43 To him all the prophets testify that everyone believing in him receives forgiveness of sins through his name." ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.
44 While Peter was still saying these things, the Holy Spirit fell on all who heard the word. ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು.
45 The circumcised believers who came with Peter were amazed that the gift of the Holy Spirit was poured out on Gentiles too. ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.
46 For they heard them speaking in tongues and praising our Father. Then Peter declared, ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,
47 "Can anyone refuse water to baptize these people, who received the Holy Spirit as we did?" “ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.
48 He ordered them baptized in Jesus Christ's name. Then they asked him to stay several days. ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]