Skip to content
The Believer's Library

Biblica® Open Kannada Contemporary Version 2022

Acts 16 OKCV

Show OKCV only
Verse × ×
1 Paul went on to Derbe and Lystra. A disciple was there named Timothy, son of a believing Jewish woman, but his father was a Greek. ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.
2 He was well thought of by the brothers at Lystra and Iconium. ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು.
3 Paul wanted him to travel with him, so he took and circumcised him, because of the Jews in those places, for they all knew his father was Greek. ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.
4 Traveling through the towns, they delivered the decisions the apostles and elders in Jerusalem had made, for them to keep. ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.
5 So the churches were strengthened in the faith and grew in numbers daily. ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.
6 They crossed the Phrygian and Galatian region, since the Holy Spirit had stopped them from speaking the word in Asia. ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.
7 Reaching Mysia, they tried entering Bithynia, but the Spirit of Jesus wouldn't let them. ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.
8 So passing by Mysia, they went down to Troas. ಆದ್ದರಿಂದ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
9 Paul saw a vision in the night: a Macedonian man stood pleading with him, "Cross over to Macedonia and help us." ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.
10 When he had seen the vision, we tried at once to leave for Macedonia, concluding our Father had called us to tell them the good news. ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.
11 So we set sail from Troas and sailed straight to Samothrace, and the next day to Neapolis, ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು.
12 and from there to Philippi, a leading city of that district of Macedonia, a Roman colony. We stayed there several days. ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.
13 On the Sabbath we went outside the gate to a river, supposing there was a place of prayer. We sat and spoke with the women gathered there. ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.
14 A woman named Lydia, from Thyatira, who sold purple cloth and worshiped our Father, was listening. The Lord opened her heart to Paul's words. ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.
15 When she and her household were baptized, she urged us: "If you judge me faithful to the Lord, come to my house and stay." And she persuaded us. ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.
16 As we went to the place of prayer, we met a slave girl possessed by a spirit of divination; she earned her owners great profit through fortune-telling. ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.
17 She followed Paul and us, shouting, "These men are servants of the Most High God, announcing to you the way of salvation." ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.
18 She did this for many days. Paul, deeply annoyed, turned and told the spirit, "I command you in the name of Jesus Christ to come out of her." It came out instantly. ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.
19 When her owners saw their hope of profit was gone, they seized Paul and Silas, dragged them to the marketplace before the rulers. ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.
20 Bringing them to the magistrates, they said, "These men are Jews, disturbing our city. ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.
21 They advocate customs that are not lawful for us as Romans to accept or practice." ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.
22 The crowd joined the attack, and the magistrates ripped off Paul and Silas's clothes and ordered them beaten with rods. ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.
23 After beating them severely, they threw them into prison, ordering the jailer to guard them securely. ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.
24 Given that order, he locked them in the inner cell and clamped their feet in stocks. ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು.
25 About midnight Paul and Silas prayed and sang hymns to our Father while the prisoners listened to them. ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.
26 Suddenly a violent earthquake shook the prison's foundations; instantly all doors opened and everyone's chains loosened. ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.
27 The jailer woke, saw the prison doors open, drew his sword meaning to kill himself, thinking the prisoners had escaped. ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28 But Paul shouted, "Don't harm yourself, for we are all here!" ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.
29 The jailer called for lights, rushed in, and fell trembling before Paul and Silas. ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.
30 Then he brought them outside and said, "Sirs, what must I do to be saved?" ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.
31 And they said, "Believe in the Lord Jesus, and you will be saved, you and your household." “ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.
32 They spoke the Lord's word to him and everyone in his house. ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು.
33 In that hour of the night, he took them and washed their wounds; then he and his whole household were baptized at once. ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.
34 He brought them up into his house, set food before them, and was overjoyed with his whole household at believing in our Father. ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.
35 But when morning came, the magistrates sent the police, saying, "Release those men." ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು.
36 The jailer told Paul, "The magistrates sent orders to release you. Come out now and go in peace." ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.
37 But Paul said to them, "They beat us publicly, without trial, Roman citizens that we are, and threw us into prison. Now they want to send us off secretly? No! Let them come themselves and lead us out." ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.
38 The officers reported these words to the magistrates, who were afraid to hear they were Roman citizens. ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.
39 They came, apologized, led them out, and asked them to leave the city. ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40 So they left the prison and went to Lydia's house. There they saw the brothers, encouraged them, and left. ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]