Skip to content
The Believer's Library

Biblica® Open Kannada Contemporary Version 2022

Acts 17 OKCV

Show OKCV only
Verse × ×
1 After traveling through Amphipolis and Apollonia, they came to Thessalonica, where there was a Jewish synagogue. ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
2 Paul, as usual, went in to them and reasoned with them from the Scriptures on three Sabbaths. ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,
3 Opening and explaining the Scriptures that the Christ must suffer and rise from the dead, he said, "This Jesus I proclaim to you is the Christ." ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.
4 Some of them were persuaded and joined Paul and Silas, along with a great many devout Greeks and quite a few leading women. ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.
5 But the Jews grew jealous, gathered evil men from the marketplace, formed a mob, and threw the city into chaos. They stormed Jason's house, seeking to bring them out to the crowd. ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.
6 Not finding them, they dragged Jason and some brothers before the city officials, shouting, "These men who have turned the world upside down have come here too, ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7 Jason welcomed them. They all defy Caesar's decrees, claiming there is another king—Jesus. ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.
8 And they stirred up the crowd and the city authorities who heard these things." ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು.
9 And when they had taken bail from Jason and the rest, they let them go. ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.
10 The brothers at once sent Paul and Silas off by night to Berea; on arrival they went to the Jewish synagogue. ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.
11 These Jews were more open-minded than those in Thessalonica, receiving the word eagerly and examining Scripture daily to see if these things were true. ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.
12 So many of them believed, along with many prominent Greek women and men. ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.
13 When Jews from Thessalonica learned Paul proclaimed the word of our Father in Berea too, they went there also, agitating and stirring up the crowds. ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.
14 The brothers immediately sent Paul off to the sea, but Silas and Timothy stayed there. ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.
15 Paul's escorts brought him to Athens, then left with orders for Silas and Timothy to join him as soon as possible. ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.
16 While Paul waited for them in Athens, his spirit was provoked within him, seeing the city full of idols. ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.
17 So he debated in the synagogue with Jews and worshipers of God, and daily in the marketplace with whoever was there. ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.
18 Some of the Epicurean and Stoic philosophers also debated with him. Some asked, "What's this babbler trying to say?" Others said, "He seems to promote foreign gods"—since he preached the good news of Jesus and the resurrection. ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.
19 They took him and brought him to the Areopagus, asking, "Can we know what this new teaching you're presenting is? ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?
20 For you bring strange things to our ears, so we want to know what they mean." ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.
21 Now all the Athenians and foreigners living there spent their time on nothing but telling or hearing something new. ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.
22 Paul stood in the middle of the Areopagus and said, "Athenians, I see that you are extremely religious in every way. ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.
23 For as I passed through and examined your sacred objects, I found an altar inscribed: 'To an unknown god.' What you worship without knowing it, I now proclaim to you. ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.
24 Our Father, who made the world and everything in it, being Sovereign of heaven and earth, doesn't live in temples made by hands, “ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.
25 nor served by human hands, as if he needed anything—he himself gives everyone life, breath, and everything. ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,
26 From one man he made every nation of mankind live across the whole earth, fixing their set times and the boundaries of their homelands, ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.
27 so they might seek our Father, perhaps reach for him and find him—though he is not far from each of us, ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.
28 for 'In him we live and move and have our being'; as even some of your own poets have said, 'We too are his descendants.' ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’
29 So as our Father's children, we shouldn't think the divine is like gold, silver, or stone—an image shaped by human skill and imagination. “ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.
30 The times of ignorance our Father overlooked, but now he commands all people everywhere to repent. ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.
31 He set a day to judge the world justly, through a man he appointed—proving it to all by raising him from the dead." ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”
32 Hearing of the resurrection of the dead, some mocked; others said, "We'll hear you on this again." ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.
33 So Paul left them. ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
34 But some men joined him and believed, including Dionysius the Areopagite, a woman named Damaris, and others. ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]