Skip to content
The Believer's Library

Biblica® Open Kannada Contemporary Version 2022

Acts 18 OKCV

Show OKCV only
Verse × ×
1 After this, Paul left Athens and went to Corinth. ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.
2 There he found a Jew named Aquila, native of Pontus, newly arrived from Italy with his wife Priscilla since Claudius had ordered all Jews out of Rome. Paul visited them, ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.
3 since they shared a trade, he stayed and worked with them—tentmakers by trade. ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.
4 Every Sabbath he reasoned in the synagogue, trying to persuade Jews and Greeks. ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.
5 When Silas and Timothy came from Macedonia, Paul was consumed by the word, testifying to the Jews that the Christ was Jesus. ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.
6 When they resisted and insulted him, he shook out his clothes and said, "Your blood is on your own heads! I'm clean of it. From now on I'll go to the Gentiles." ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.
7 He left the synagogue and went to the house of Titius Justus, a worshiper of our Father, next door to the synagogue. ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.
8 Crispus, the synagogue leader, believed in the Lord with his whole household; many Corinthians who heard Paul believed and were baptized. ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು.
9 One night the Lord told Paul in a vision, "Don't be afraid; keep speaking, don't stay silent, ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.
10 for I am with you, and no one will attack you to harm you, for I have many people in this city." ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.
11 So Paul stayed for a year and six months, teaching the word of our Father among them. ಆದ್ದರಿಂದ ಪೌಲನು ಅಲ್ಲಿ ಒಂದೂವರೆ ವರ್ಷವಿದ್ದು ಅವರಿಗೆ ದೇವರ ವಾಕ್ಯವನ್ನು ಬೋಧಿಸಿದನು.
12 While Gallio was proconsul of Achaia, the Jews united against Paul and brought him before the tribunal, ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,
13 saying, "This man is persuading people to worship God in ways contrary to the law." “ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.
14 As Paul was about to speak, Gallio told the Jews, "If this were some wrong or vicious crime, Jews, I'd have reason to put up with you. ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.
15 Since this is a dispute about words, names, and your own law, settle it yourselves. I won't judge such matters. ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.
16 And he drove them away from the tribunal." ಹೀಗೆ ಅವನು ಅವರನ್ನು ನ್ಯಾಯಸ್ಥಾನದಿಂದ ಹೊರಗೆ ಕಳುಹಿಸಿಬಿಟ್ಟನು.
17 So they all grabbed Sosthenes, the synagogue leader, and beat him before the judgment seat, but none of it concerned Gallio. ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.
18 Paul stayed on in Corinth for many more days. Then he said farewell to the brothers and sisters and sailed for Syria, accompanied by Priscilla and Aquila. At Cenchreae he had his hair cut off, for he was keeping a vow. ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.
19 They reached Ephesus, where Paul left Priscilla and Aquila, but he himself entered the synagogue and reasoned with the Jews. ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.
20 When they asked him to stay longer, he declined. ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ.
21 But he left, saying, "I will come back to you if our Father is willing," and sailed from Ephesus. ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.
22 Landing at Caesarea, he went up, greeted the church, then went down to Antioch. ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.
23 After some time there, he set out through Galatia and Phrygia, strengthening all the disciples. ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.
24 A Jew named Apollos, born in Alexandria, came to Ephesus—a learned man, well versed in the Scriptures. ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.
25 He had been taught the way of the Lord, and, spirit boiling over, spoke and taught accurately about Jesus—though he knew only John's baptism. ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.
26 He spoke boldly in the synagogue. Priscilla and Aquila heard him, took him aside, and explained the way of our Father more accurately. ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.
27 When Apollos wanted to cross to Achaia, the brothers and sisters encouraged him and wrote to the disciples to welcome him; arriving, he greatly helped those who had believed by grace, ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.
28 for he forcefully refuted the Jews in public, proving from the Scriptures that the Christ was Jesus. ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]