Skip to content
The Believer's Library

Biblica® Open Kannada Contemporary Version 2022

Acts 19 OKCV

Show OKCV only
Verse × ×
1 While Apollos was in Corinth, Paul crossed the inland region and reached Ephesus, where he found some disciples. ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,
2 He asked them, "Did you receive the Holy Spirit when you believed?" They replied, "No, we haven't even heard there is a Holy Spirit." “ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.
3 So he asked, "Into what then were you baptized?" "Into John's baptism," they said. “ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.
4 Paul said, "John baptized with a baptism of repentance, telling people to believe in the one coming after him—Jesus." ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.
5 On hearing this, they were baptized in the name of the Lord Jesus. ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.
6 When Paul laid hands on them, the Holy Spirit came on them; they spoke in tongues and prophesied. ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.
7 There were about twelve men in all. ಅವರು ಸುಮಾರು ಹನ್ನೆರಡು ಜನ ಪುರುಷರಿದ್ದರು.
8 Paul entered the synagogue, speaking boldly three months, reasoning and persuading about our Father's kingdom. ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.
9 When some grew stubborn, refusing to believe and slandering the Way before the crowd, he withdrew from them, took the disciples, and reasoned daily in Tyrannus's lecture hall. ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.
10 This continued two years, so all living in Asia, both Jews and Greeks, heard the word of the Lord Jesus. ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.
11 Our Father did extraordinary miracles through the hands of Paul, ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.
12 so even handkerchiefs and aprons that touched his skin were carried to the sick, and diseases left them and evil spirits went out of them. ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.
13 Some traveling Jewish exorcists also tried invoking the name of the Lord Jesus over those with evil spirits, saying, "I command you by the Jesus Paul preaches." ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.
14 Seven sons of a Jewish high priest named Sceva were doing this. ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು.
15 But the evil spirit answered them, "Jesus I know, and Paul I recognize, but who are you?" ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ,
16 And the man who had the evil spirit leaped on them, overpowered them all, and prevailed against them, so that they fled out of that house naked and wounded. ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.
17 All Jews and Greeks living in Ephesus learned of this. Fear seized them all, and the name of the Lord Jesus was highly praised. ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.
18 Many of those who had become believers also came, confessing and disclosing their practices. ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.
19 Many who had practiced sorcery brought their scrolls together and burned them before everyone. They added up the price and found it worth 50,000 days' wages. ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.
20 So the word of the Lord Jesus continued to grow mightily and prevail. ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.
21 When this was done, Paul decided in his spirit to go through Macedonia and Achaia to Jerusalem, saying, "After I've been there, I must see Rome too." ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.
22 He sent two of his assistants, Timothy and Erastus, to Macedonia, while staying in Asia himself a while longer. ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.
23 About that time there arose a serious disturbance concerning the Way. ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.
24 For a man named Demetrius, a silversmith who made silver shrines of Artemis, kept many craftsmen busy. ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು.
25 He gathered them and workers in similar trades and said, "Men, you know our wealth comes from this trade. ಅವನು ಶಿಲ್ಪಿಗಳನ್ನೂ ಆ ಕಸುಬಿಗೆ ಸಂಬಂಧಪಟ್ಟ ವ್ಯಾಪಾರಿಗಳನ್ನೂ ಒಟ್ಟಿಗೆ ಕೂಡಿಸಿ ಅವರಿಗೆ, “ಜನರೇ, ಈ ವೃತ್ತಿಯಿಂದ ನಮಗೆ ಉತ್ತಮ ಆದಾಯ ಬರುತ್ತಿದೆಯೆಂಬುದನ್ನು ನೀವು ತಿಳಿದಿರುವಿರಿ.
26 You see and hear that this Paul has persuaded and turned away a great many people—not only in Ephesus but nearly all of Asia—telling them gods made by hands aren't gods at all. ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.
27 The risk isn't just that our trade loses its good name, but that the temple of the great goddess Artemis will count for nothing, and she, worshiped by all Asia and the world, will be stripped of her greatness." ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.
28 Hearing this, they were enraged and shouted, "Great is Artemis of the Ephesians!" ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.
29 The city filled with confusion; together they rushed into the theater, dragging along Gaius and Aristarchus, Macedonians, Paul's traveling companions. ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.
30 When Paul wanted to go in among the crowd, the disciples would not let him. ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31 Even some officials of the province, his friends, sent word urging him not to risk entering the theater. ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು.
32 Meanwhile some shouted one thing, others another—the assembly was in confusion, and most didn't know why they'd gathered. ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ.
33 Some in the crowd coached Alexander, whom the Jews pushed forward; motioning with his hand, he wanted to defend himself before the people. ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.
34 Realizing he was a Jew, they shouted as one for about two hours, "Great is Artemis of the Ephesians!" ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.
35 When the town clerk had quieted the crowd, he said, "Men of Ephesus, who doesn't know the Ephesians' city is temple keeper of the great Artemis and of the image that fell from heaven? ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ?
36 Since these things cannot be denied, you ought to keep calm and do nothing rash. ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.
37 For you have brought these men here who are neither temple robbers nor blasphemers of our goddess. ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.
38 So if Demetrius and his fellow craftsmen have a charge against anyone, courts are in session and proconsuls are available—let them accuse each other there. ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.
39 But if you are seeking anything further, it will be settled in the regular assembly. ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು.
40 We risk being charged with today's riot, since we have no reason to justify this uproar." ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.
41 And when he had said this, he dismissed the assembly. ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]