Skip to content
The Believer's Library

Biblica® Open Kannada Contemporary Version 2022

Acts 2 OKCV

Show OKCV only
Verse × ×
1 When the day of Pentecost arrived, they were all together in one place. ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
2 Suddenly a sound like a violent, rushing wind came from heaven and filled the entire house where they sat. ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 What looked like divided tongues of fire appeared and rested on each one of them. ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.
4 All were filled with the Holy Spirit and began speaking in other tongues, as the Spirit gave them words to say. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
5 At that time devout Jews from every nation under heaven were living in Jerusalem. ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
6 When this sound rang out, a crowd gathered, confused, since each one heard them speak in his own language. ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.
7 They were amazed and astonished, saying, "Are not all these who are speaking Galileans? ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?
8 How is it, then, that each of us hears them in our own native language? ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?
9 Parthians, Medes, and Elamites; those who live in Mesopotamia, Judea and Cappadocia, Pontus and Asia, ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,
10 Phrygia, Pamphylia, Egypt, the parts of Libya near Cyrene; visitors from Rome, Jews and converts to Judaism; ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.
11 Cretans and Arabs—we hear them telling in our own tongues the mighty works of our Father!" ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.
12 They were all amazed and perplexed, saying to one another, "What does this mean?" ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.
13 But others mocked and said, "They are full of sweet wine." ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.
14 But Peter stood with the eleven, raised his voice, and declared to them: "Men of Judea, everyone living in Jerusalem—know this and listen carefully to my words. ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.
15 These people are not drunk, as you suppose, for it is only nine o'clock in the morning. ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!
16 No, this is what was spoken through the prophet Joel: ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:
17 'And in the last days, says our Father, I will pour out my Spirit on all people; your sons and your daughters will prophesy, your young men will see visions, and your old men will dream dreams. “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
18 Even on my male servants and my female servants in those days I will pour out my Spirit, and they will prophesy. ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.
19 I will show wonders in the heavens above and signs on the earth below—blood and fire and billows of smoke. ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
20 The sun will be turned to darkness and the moon to blood, before the great and glorious day of the Lord comes. ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
21 And everyone who calls on the name of the Lord will be saved.'" ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’
22 "Men of Israel, hear these words: Jesus of Nazareth—a man our Father attested to you through miracles, wonders, and signs our Father did through him among you, as you yourselves know. “ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
23 This man, handed over by our Father's set plan and foreknowledge, you crucified and killed by the hands of lawless men. ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.
24 But our Father raised him, freeing him from death's agony, since death could not hold him. ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
25 For David says of him: 'I saw our Father always before me, for he's at my right hand, so I won't be shaken.' ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.
26 Therefore my heart was glad and my tongue rejoiced; moreover, my body also will rest in hope. ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.
27 For you will not abandon my soul to the grave, nor let your Holy One see decay. ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.
28 You have shown me the paths of life; you will fill me with gladness in your presence." ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’
29 "Brothers, I can tell you plainly: our ancestor David died, was buried, and his tomb remains with us to this day. “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.
30 Since he was a prophet, he knew our Father had sworn an oath to seat one of his descendants on his throne, ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.
31 he foresaw and spoke of the Christ's resurrection, that he was not abandoned to the grave, nor his body saw decay. ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’
32 This Jesus our Father raised up, and we are all witnesses of it. ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.
33 So, lifted up to our Father's right hand, having received the promised Holy Spirit from the Father, he poured out what you now see and hear. ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.
34 For David never went up into heaven, but he himself says: "Our Father said to my Lord, 'Sit at my right hand, ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
35 until I make your enemies a footstool for your feet.'" ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’
36 "So let the whole house of Israel know for certain: our Father made this Jesus, whom you crucified, both Lord and Christ." “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.
37 Cut to the heart at this, they asked Peter and the other apostles, "Brothers, what should we do?" ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.
38 Peter said to them, "Repent, and each of you be baptized in the name of Jesus Christ for the forgiveness of your sins, and you will receive the gift of the Holy Spirit. ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
39 For the promise is for you, your children, and all far off—as many as the Sovereign our Father will call to himself." ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.
40 And with many other words he warned and urged them, saying, "Save yourselves from this corrupt generation." ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.
41 So those who welcomed his message were baptized, and about 3,000 people were added that day. ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
42 They devoted themselves to the apostles' teaching and deep communion, to the breaking of bread and the prayers. ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
43 Awe came over everyone, and many wonders and signs were done through the apostles. ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.
44 All who believed were together and had all things in common. ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
45 They sold their property and possessions and distributed the proceeds to all, as anyone needed. ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.
46 Every day, devoting themselves together in the temple, breaking bread house to house, they shared food with joyful, sincere hearts, ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.
47 praising our Father, with favor among all the people. The Lord added to their number daily those being saved. ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]