Skip to content
The Believer's Library

Biblica® Open Kannada Contemporary Version 2022

Acts 21 OKCV

Show OKCV only
Verse × ×
1 Having torn ourselves away from them, we set sail and went straight to Cos, then the next day to Rhodes, then from there to Patara. ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.
2 Finding a ship crossing over to Phoenicia, we went aboard and set sail. ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.
3 Sighting Cyprus and leaving it on our left, we sailed to Syria and landed at Tyre, where the ship was to unload its cargo. ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.
4 We found the disciples there and stayed seven days. Through the Holy Spirit they kept telling Paul not to set foot in Jerusalem. ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.
5 When our time there was up, we left and went on, all of them with wives and children walking with us out of the city. We knelt on the beach and prayed, ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
6 and said farewell to one another. Then we went aboard the ship, and they returned home. ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.
7 Finishing our voyage from Tyre, we arrived at Ptolemais, greeted the brothers, and stayed one day with them. ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.
8 The next day we left for Caesarea and entered the house of Philip the evangelist, one of the seven, and stayed with him. ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು.
9 He had four unmarried daughters who prophesied. ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.
10 While we were staying there for many days, a prophet named Agabus came down from Judea. ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು.
11 He came to us, took Paul's belt, tied his own feet and hands, and said, "The Holy Spirit says this: the Jews in Jerusalem will tie up this belt's owner the same way, then hand him over into Gentile hands." ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.
12 When we heard this, we and the local people begged Paul not to go up to Jerusalem. ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.
13 Paul answered, "Why weep and break my heart? I'm ready not only to be bound but to die in Jerusalem for the name of the Lord Jesus." ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.
14 And since he would not be persuaded, we fell silent and said, "The Lord's will be done." ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.
15 After these days we got ready and went up to Jerusalem. ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.
16 Some disciples from Caesarea also went with us, bringing us to stay with Mnason, a Cypriot and early disciple. ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.
17 When we arrived in Jerusalem, the brothers welcomed us gladly. ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.
18 On the following day Paul went with us to see James, and all the elders were present. ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.
19 He greeted them, then related one by one what our Father had done among the Gentiles through his ministry. ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.
20 Hearing this, they praised our Father, then told him, "You see, brother, how many thousands of Jews have believed, and all are passionate for the law. ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.
21 They were told you teach all Jews among the nations to abandon Moses, telling them not to circumcise their children or follow our customs. ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.
22 So what should we do? They will certainly hear that you have come. ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.
23 So do what we tell you. We have four men who are under a vow. ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.
24 Take these men, purify yourself with them, and pay their expenses so they may shave their heads. Then everyone will know the reports about you are false, and that you yourself keep the law. ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.
25 As for the Gentiles who have believed, we already wrote our decision: avoid food offered to idols, blood, strangled animals, and sexual immorality." ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.
26 So Paul took the men, and the next day, having purified himself with them, entered the temple, announcing when the purification days would end and the offering would be made for each of them. ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.
27 As the seven days were ending, Jews from Asia saw him in the temple, stirred up the whole crowd, and grabbed him, ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.
28 shouting, "Men of Israel, help! This is the man teaching everyone everywhere against our people, the law, and this place. He's even brought Greeks into the temple, making this holy place unclean." “ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.
29 They had earlier seen Trophimus the Ephesian with Paul in the city and assumed Paul had brought Trophimus into the temple. ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.
30 The whole city was stirred; people ran together, seized Paul, dragged him out of the temple, and at once the gates were shut. ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.
31 As they tried to kill him, word reached the cohort commander that all Jerusalem was in turmoil. ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು.
32 He immediately took soldiers and centurions and ran down to them. Seeing the commander and soldiers, the crowd stopped beating Paul. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.
33 The commander came, seized him, ordered him bound with two chains, then asked who he was and what he'd done. ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.
34 In the crowd some shouted one thing, some another. Unable to learn what was true because of the uproar, he ordered Paul brought into the barracks. ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.
35 When Paul reached the steps, soldiers had to carry him because of the crowd's violence, ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
36 for the mob kept following, shouting, "Away with him!" ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.
37 As Paul was about to be led into the barracks, he asked the commander, "May I say something to you?" He replied, "Do you know Greek?" ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”
38 Aren't you the Egyptian who stirred up a revolt earlier and led 4,000 Assassins into the wilderness? “ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.
39 Paul answered, "I am a Jew, from Tarsus in Cilicia, a citizen of no insignificant city. I beg you, let me speak to the people." ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.
40 With permission granted, Paul stood on the steps and motioned to the people with his hand. When deep silence fell, he spoke to them in Hebrew: ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]