Skip to content
The Believer's Library

Biblica® Open Kannada Contemporary Version 2022

Acts 22 OKCV

Show OKCV only
Verse × ×
1 "Brothers and fathers, listen now to my defense before you." “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.
2 When they heard him speaking to them in Hebrew, they grew even more quiet. And he said: ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. ಆಗ ಪೌಲನು:
3 "I am a Jew, born in Tarsus of Cilicia, raised in this city, trained at Gamaliel's feet in the strict law of our ancestors, as eager for God as all of you are today. “ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.
4 I persecuted this Way to the death, binding and delivering to prison both men and women, ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,
5 as the high priest and the whole council of elders can testify. From them I received letters to the brothers in Damascus, and went to bring those there as prisoners to Jerusalem for punishment." ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.
6 "Traveling and nearing Damascus about noon, a great light from heaven suddenly flashed around me." “ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು.
7 I fell to the ground and heard a voice say to me, "Saul, Saul, why are you persecuting me?" ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.
8 I answered, "Who are you, Lord?" He replied, "I am Jesus of Nazareth, whom you're persecuting." “ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು.
9 "Those with me saw the light but didn't understand the voice of the one speaking to me." ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ.
10 I said, "What should I do, Lord?" The Lord replied, "Get up and go into Damascus. There you'll be told all you've been appointed to do." “ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.
11 "Since that light's brightness blinded me, my companions led me by the hand into Damascus." ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು.
12 "A man named Ananias, devout by the law, well spoken of by all the Jews living there, “ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು.
13 came and stood by me and said, 'Brother Saul, receive your sight.' At that very hour I looked up and saw him." ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು.
14 "He said, 'The God of our fathers appointed you to know his will, to see the Righteous One, and to hear a voice from his mouth; “ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.
15 for you will be his witness to everyone of what you have seen and heard. ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ.
16 And now, why wait? Get up, be baptized, wash away your sins, calling on his name." ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.
17 "When I had returned to Jerusalem and was praying in the temple, I fell into a trance," “ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.
18 and saw him saying to me, "Hurry and leave Jerusalem quickly, because they won't accept your testimony about me." ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.
19 I said, "Lord, they themselves know that I went from synagogue to synagogue imprisoning and beating those who believed in you. “ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು.
20 When the blood of your witness Stephen was being shed, I stood by, approving and guarding the cloaks of those killing him.'" ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.
21 "And he said to me, 'Go, for I will send you far away to the Gentiles.'" “ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”
22 Up to that point they listened, then they raised their voices and shouted, "Erase such a man from the earth! He shouldn't be allowed to live!" ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.
23 And as they were shouting and throwing off their cloaks and flinging dust into the air, ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು,
24 the commander ordered him taken into the barracks and whipped, to learn why they were shouting against him like this. ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.
25 As they stretched him out for the straps, Paul said to the centurion standing there, "Is it legal for you to whip a Roman citizen who hasn't been condemned?" ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.
26 Hearing this, the centurion went to the commander and reported it: "What are you about to do? This man is a Roman citizen." ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.
27 So the commander came and asked, "Tell me, are you a Roman citizen?" "Yes," he said. ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ, ಅವನು, “ಹೌದು,” ಎಂದನು.
28 The commander said, "I paid a large sum for this citizenship." But Paul said, "I was born a citizen." “ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು.
29 So those about to question him withdrew at once; the commander was afraid, realizing he had bound a Roman citizen. ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.
30 The next day, wanting to know exactly why the Jews accused him, the commander freed Paul, ordered the chief priests and the whole council to assemble, brought Paul down, and set him before them. ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]