Skip to content
The Believer's Library

Biblica® Open Kannada Contemporary Version 2022

Acts 23 OKCV

Show OKCV only
Verse × ×
1 Paul stared at the council: "Brothers, I have lived my life before our Father in all good conscience until today." ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.
2 The high priest Ananias ordered those standing near him to strike Paul on the mouth. ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.
3 Paul said to him, "Our Father will strike you, you whitewashed wall! You sit there to judge me by the law, yet you break the law by ordering me struck?" ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.
4 Those standing nearby said, "Do you dare to insult our Father's high priest?" ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು,
5 Paul said, "Brothers, I didn't know he was high priest; for Scripture says, 'Don't speak evil of your people's ruler.'" “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.
6 Paul, knowing some were Sadducees, others Pharisees, cried out in the council, "Brothers, I am a Pharisee, son of Pharisees. I am on trial over the hope and resurrection of the dead!" ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.
7 When he said this, a dispute arose between the Pharisees and Sadducees, and the assembly was split. ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.
8 For the Sadducees say there is no resurrection, and neither angel nor spirit, but the Pharisees acknowledge them all. ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.
9 A loud uproar broke out. Some scribes from the Pharisees' side stood and argued sharply: "We find nothing wrong in this man. What if a spirit or an angel spoke to him?" ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.
10 As the dispute grew violent, the commander, fearing Paul would be torn apart by them, ordered the soldiers to go down, seize him from among them, and bring him into the barracks. ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.
11 The next night our Lord Jesus stood beside him and said, "Take courage! As you testified about me in Jerusalem, so you must testify in Rome too." ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.
12 At daybreak the Jews conspired and swore not to eat or drink until they killed Paul. ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.
13 There were more than forty who had joined in this plot. ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು.
14 They went to the chief priests and elders and said, "We have bound ourselves under a solemn oath to taste nothing until we kill Paul. ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.
15 So now, you and the council, ask the commander to bring him down to you, as if to examine his case more closely. We're ready to kill him before he arrives." ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.
16 But Paul's sister's son, hearing of the ambush, went and entered the barracks and told Paul. ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.
17 Paul called a centurion and said, "Take this young man to the commander—he has something to report." ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.
18 So he took him to the commander and said, "The prisoner Paul called me and asked me to bring this young man to you; he has something to tell you." ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.
19 The commander took his hand, led him aside privately, and asked, "What do you have to tell me?" ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.
20 He said, "The Jews have agreed to ask you to bring Paul down to the council tomorrow, pretending to inquire more precisely about him. ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.
21 Don't listen to them—more than forty of their men are waiting in ambush for him. They've bound themselves by oath not to eat or drink until they kill him, and now they're ready, waiting for your agreement." ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.
22 The commander sent the young man off, ordering him, "Tell no one you reported this to me." “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.
23 Then he called two centurions: "Ready 200 soldiers for Caesarea, and seventy horsemen, and 200 spearmen, by nine tonight." ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.
24 He told them to provide mounts for Paul, to bring him safely to Governor Felix. ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.
25 And he wrote a letter that read as follows:" ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು:
26 "Claudius Lysias, to his Excellency Governor Felix: Greetings. ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.
27 The Jews seized this man and were about to kill him when I came with my troops and rescued him, having learned he was a Roman citizen. ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.
28 Wanting to know the charge they were bringing against him, I brought him down to their council. ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.
29 I found him accused over questions of their law, with no charge deserving death or imprisonment. ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.
30 Told of a plot against the man, I sent him to you at once, also ordering his accusers to state their case against him before you." ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.
31 So the soldiers, following their orders, took Paul and brought him by night to Antipatris. ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.
32 The next day they let the horsemen go on with him while they returned to the barracks. ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.
33 The horsemen reached Caesarea, delivered the letter to the governor, and presented Paul to him. ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.
34 After reading it, the governor asked what province he was from, and learned he was from Cilicia, ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,
35 "I'll hear you," he said, "once your accusers arrive." He ordered him held under guard in Herod's headquarters. “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]