Skip to content
The Believer's Library

Biblica® Open Kannada Contemporary Version 2022

Acts 24 OKCV

Show OKCV only
Verse × ×
1 Five days later the high priest Ananias came down with some elders and a lawyer, Tertullus, and they brought charges against Paul before the governor. ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.
2 When Paul was summoned, Tertullus began his accusation: "Through you we enjoy great peace, and reforms have come to this nation through your foresight, ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.
3 we acknowledge this in every way and everywhere, most excellent Felix, with all gratitude. ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.
4 But so as not to detain you any further, I ask you to hear us kindly, in a few words. ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
5 We found this man a plague, stirring up riots among all the Jews worldwide, and a ringleader of the Nazarene sect. “ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.
6 He even tried to desecrate the temple, so we seized him. ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.
7 Not in this edition ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.
8 By examining him yourself, you can learn all we accuse him of." ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”
9 The Jews also joined in the attack, insisting that these things were so. ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.
10 The governor motioned him to speak. Paul answered: "Knowing you've judged this nation for many years, I gladly defend myself. ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.
11 You can confirm it's no more than twelve days since I went up to worship in Jerusalem. ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು.
12 They found me arguing with no one, stirring up no crowd—not in the temple, the synagogues, or anywhere in the city. ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.
13 Nor can they prove to you the charges they are now bringing against me. ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.
14 But I confess to you: following the Way—they call it a sect—I worship the God of our ancestors, believing all that agrees with the Law and is written in the Prophets. ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.
15 I have hope in our Father—one these men also hold—that the righteous and unrighteous alike will rise. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.
16 So I always strive to keep my conscience clear before our Father and before people. ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.
17 After several years I came to bring charitable gifts for my nation's poor, and offerings. “ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.
18 Amid this, they found me purified in the temple—no crowd, no uproar. ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.
19 Some Jews from Asia should be here before you to accuse, if they have anything against me. ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.
20 Or let these men themselves say what wrongdoing they found when I stood before the council, ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ.
21 except this one thing I shouted standing among them: 'It's over the resurrection of the dead that I'm on trial before you today.'" ‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.
22 Felix, who knew the Way fairly well, adjourned the hearing: "When Lysias the commander arrives, I will decide your case." ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.
23 He ordered the centurion to guard Paul but allow him some freedom, not stopping any of his friends from serving him. ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.
24 Some days later, Felix came with his wife Drusilla, a Jew, sent for Paul, and heard him about faith in Christ Jesus. ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.
25 As Paul discussed righteousness, self-control, and the coming judgment, Felix grew frightened and said, "That's enough for now; go. When I find time, I'll call for you." ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.
26 He also hoped Paul would give him money, so he sent for him often and talked with him. ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.
27 After two years, Porcius Festus succeeded Felix. Wanting to please the Jews, Felix left Paul in prison. ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]