Skip to content
The Believer's Library

Biblica® Open Kannada Contemporary Version 2022

Acts 27 OKCV

Show OKCV only
Verse × ×
1 Once it was decided we would sail to Italy, they handed Paul and some other prisoners to a centurion named Julius of the Imperial Cohort. ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.
2 We boarded a ship from Adramyttium bound for the ports along the coast of Asia and put out to sea. Aristarchus, a Macedonian from Thessalonica, was with us. ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.
3 The next day we docked at Sidon. Julius treated Paul kindly, letting him go to friends for care. ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.
4 From there we put to sea and sailed along Cyprus's sheltered side, since the winds opposed us. ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,
5 Having sailed across the open sea off Cilicia and Pamphylia, we came to Myra in Lycia. ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.
6 There the centurion found an Alexandrian ship sailing for Italy and put us aboard it. ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.
7 Sailing slowly for many days, we barely reached Cnidus. Since the wind blocked us, we sailed along the sheltered side of Crete, off Salmone. ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.
8 Barely coasting along, we reached Fair Havens, a place near the town of Lasea. ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.
9 Much time was lost—even the Fast had passed, making sailing dangerous now. So Paul warned them, ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,
10 "Men, I see this voyage will bring disaster and heavy loss—not only to the cargo and ship, but also to our lives." “ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.
11 But the centurion trusted the pilot and shipowner more than Paul's words. ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.
12 Since the harbor was unfit for winter, most decided to sail on, hoping somehow to reach Phoenix, a Crete harbor facing southwest and northwest, and winter there. ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.
13 When a south wind blew gently, thinking they'd gained their purpose, they weighed anchor and sailed close along Crete. ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.
14 But before long, a hurricane-force wind called the Northeaster swept down from the island. ಆದರೆ ಸ್ವಲ್ಪ ಸಮಯದಲ್ಲಿಯೇ “ಈಶಾನ್ಯ ಮಾರುತ” ಎಂಬ ಪ್ರಚಂಡ ಗಾಳಿ ದ್ವೀಪದ ಕಡೆಯಿಂದ ಬೀಸತೊಡಗಿತು.
15 The ship was caught and couldn't face the wind, so we gave way and drifted. ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.
16 Running under a small island called Cauda, we barely managed to secure the ship's lifeboat. ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.
17 Once hoisted aboard, they used ropes to brace the hull. Fearing they'd run aground on Syrtis's sandbars, they lowered the sea anchor and were driven along. ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.
18 The storm battered us so violently that the next day they began throwing cargo overboard. ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.
19 On the third day, with their own hands they threw the ship's gear overboard. ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು.
20 For many days sun and stars didn't appear, the fierce storm kept raging, and we finally lost all hope of being saved. ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.
21 After they had gone a long time without food, Paul stood among them and said, "Men, you should have obeyed me and not sailed from Crete; then you would have spared yourselves this disaster and loss. ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.
22 Now I urge you to stay encouraged: none of you will lose your life, only the ship will be lost. ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.
23 Last night an angel of our Father—the one I belong to and serve—stood beside me, ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,
24 and said, 'Don't be afraid, Paul. You must stand before Caesar, and look—our Father has given you the lives of all sailing with you.' ‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.
25 So take courage, men—I trust our Father: it will be just as I was told. ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.
26 But we must run aground on some island." ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.
27 On the fourteenth night, still driven across the Adriatic Sea, the sailors sensed near midnight that land was approaching. ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ,
28 They sounded and found 120 feet; going a little farther, they sounded again and found ninety feet. ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.
29 Afraid of hitting rocks, they dropped four anchors from the stern and prayed for daylight. ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.
30 The sailors tried to escape from the ship, lowering the lifeboat into the sea, pretending to run out anchors from the bow. ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.
31 Paul told the centurion and soldiers, "Unless these men stay in the ship, you can't be saved." ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.
32 So the soldiers cut the ropes holding the lifeboat and let it drift away. ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.
33 Just before dawn, Paul urged everyone to eat, saying, "This is the fourteenth day you've waited anxiously, without food, having eaten nothing. ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.
34 So I urge you to eat—this is for your survival. Not a hair from any of your heads will be lost." ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.
35 Saying this, he took bread, thanked our Father before them all, broke it, and began to eat. ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.
36 They were all encouraged and ate some food themselves. ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.
37 Altogether there were 276 of us on board. ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.
38 Once satisfied with food, they lightened the ship by tossing the grain into the sea. ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು.
39 At daylight they did not recognize the land, but noticed a bay with a sandy beach, and planned, if possible, to run the ship aground there. ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.
40 They cut the anchors loose, leaving them in the sea, and at the same time untied the rudder ropes. Then they hoisted the foresail to the wind and headed for the beach. ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.
41 But hitting a sandbar where two currents met, they ran the ship aground—the bow stuck fast, unmoving, while the waves' force broke the stern apart. ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.
42 The soldiers planned to kill the prisoners so that none of them could swim away and escape. ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.
43 But the centurion, wanting to save Paul, stopped them from their plan, and ordered those who could swim to jump in first and get to shore, ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.
44 and the rest—some on planks, some on ship debris. So everyone reached land safely. ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]