Skip to content
The Believer's Library

Biblica® Open Kannada Contemporary Version 2022

Acts 3 OKCV

Show OKCV only
Verse × ×
1 Peter and John were going up to the temple at around three in the afternoon, the hour of prayer. ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.
2 A man lame from birth was carried and placed daily at the temple gate called Beautiful, to beg from those entering the temple. ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.
3 Seeing Peter and John about to go into the temple, he asked them for money. ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.
4 And Peter, gazing at him with John, said, "Look at us." ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.
5 And he fixed his attention on them, expecting to receive something from them. ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.
6 Peter said, "I own no silver or gold, but I give you what I have: in the name of Jesus Christ of Nazareth, rise and walk." ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,
7 Taking his right hand, he raised him up; instantly his feet and ankles grew strong. ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.
8 Jumping up, he stood, began walking, and entered the temple with them, walking, jumping, and praising our Father. ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
9 And all the people saw him walking and praising our Father. ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.
10 They recognized him as the beggar who sat at the temple's Beautiful Gate, and were filled with wonder and amazement at what had happened to him. ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.
11 As he held on to Peter and John, all the people ran to them at the portico called Solomon's, utterly astonished. ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.
12 Seeing this, Peter said to the people, "Israelites, why does this amaze you? Why stare at us, as if by our own power or godliness we made him walk? ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?
13 The God of Abraham, Isaac, and Jacob, the God of our fathers, glorified his servant Jesus, whom you handed over and denied before Pilate, when Pilate decided to release him. ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.
14 But you denied the Holy and Righteous One, asking that a murderer be given to you. ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.
15 You killed the Author of life; our Father raised him from the dead. To this we are witnesses. ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.
16 His name, through faith in his name, has made this man strong—the very man you see and know. And faith in Jesus has given him this complete health right before your eyes. ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.
17 "And now, brothers, I know that you acted in ignorance, as did also your rulers. “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.
18 But our Father fulfilled what he predicted through all the prophets: his Christ would suffer. ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.
19 Repent, then, and turn back, so your sins are wiped out, ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
20 that times of refreshing may come from our Father's presence, and that he may send the Christ appointed for you, Jesus, ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.
21 whom heaven must receive until all things are restored, about which our Father spoke through his holy prophets long ago. ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.
22 Moses said, 'Your Father will raise up a prophet like me for you, from your brothers. Listen to him in everything he tells you.' ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.
23 Anyone who does not listen to that prophet will be utterly destroyed from among the people.' ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’
24 All the prophets who spoke, from Samuel onward, also announced these days. “ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.
25 You are the sons of the prophets and of the covenant our Father made with your fathers, telling Abraham, 'By your offspring all the families of the earth will be blessed.' ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.
26 Our Father raised up his servant and sent him to you first, to bless you by turning each of you from your evil." ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]