Skip to content
The Believer's Library

Biblica® Open Kannada Contemporary Version 2022

Acts 4 OKCV

Show OKCV only
Verse × ×
1 While Peter and John were speaking to the people, the priests, the temple captain, and the Sadducees came up to them, ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.
2 greatly annoyed because they were teaching the people and proclaiming the resurrection from the dead in Jesus. ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.
3 They arrested them and put them in custody until the next day, since it was already evening. ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.
4 But many who heard the message believed, and the men's number reached about 5,000. ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.
5 The next day their rulers, elders, and teachers of the law gathered together in Jerusalem, ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.
6 with Annas the high priest, Caiaphas, John, Alexander, and all who were of the high-priestly family. ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.
7 They stood them in the middle and asked, "By what power or by what name did you do this?" ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.
8 Then Peter, filled with the Holy Spirit, said to them, "Rulers of the people and elders, ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!
9 if we're questioned today about a good deed to a sick man, how he was healed. ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.
10 Know this, all of you and all Israel's people: by the name of Jesus Christ of Nazareth, whom you crucified, whom our Father raised from the dead—by him this man stands before you well. ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.
11 This Jesus is "the stone you builders rejected, which has become the cornerstone." ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.
12 Salvation is in no one else; no other name under heaven is given among people by which we must be saved." ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.
13 Seeing Peter and John's boldness, and realizing they were uneducated, ordinary men, they were amazed and recognized they had been with Jesus. ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.
14 Seeing the healed man standing with them, they had nothing to say against it. ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.
15 So they ordered them to leave the council, and then they conferred among themselves, ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,
16 saying, "What should we do with these men? A notable sign has happened through them, plain to all who live in Jerusalem, and we cannot deny it. “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.
17 But to stop this from spreading further among the people, let's warn them to speak to no one in this name again." ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.
18 They called them and ordered them not to speak or teach at all in Jesus' name. ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.
19 Peter and John answered them, "You judge whether it's right before our Father to listen to you rather than to him. ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.
20 For we cannot help speaking about what we have seen and heard." ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.
21 After more threats, they released them, finding no way to punish them because of the people, since all were glorifying our Father for what happened. ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.
22 For the man who had received this sign of healing was over forty years old. ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.
23 Once released, they went to their own people and reported all the chief priests and elders had said to them. ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.
24 Hearing this, they raised their voices together to our Father and said, "Sovereign Father, you made heaven, earth, sea, and everything in them. ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.
25 You spoke by the Holy Spirit through the mouth of our father David, your servant: "Why did the nations rage and the peoples plot in vain?" ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?
26 The kings of the earth took their stand, and the rulers gathered together against our Father and against his Anointed." ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’
27 For truly, in this city, Herod and Pontius Pilate gathered with the Gentiles and peoples of Israel against your holy servant Jesus, whom you anointed, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.
28 to do whatever your hand and your plan had decided beforehand should happen. ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.
29 Now, Father, see their threats, and let your servants speak your word with all boldness, ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.
30 as you reach out your hand to heal, and signs and wonders occur through the name of your holy servant Jesus. ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”
31 After they prayed, the place they were gathered in shook; all were filled with the Holy Spirit and spoke the word of our Father boldly. ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
32 All the believers were one in heart and soul; no one called any possession their own, but held everything in common. ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.
33 With great power the apostles testified to the Lord Jesus's resurrection, and great grace rested on them all. ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.
34 No one among them was needy: all who owned land or houses sold them and brought the price of what was sold, ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,
35 and laid it at the apostles' feet, and it was distributed to each according to their need. ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.
36 Joseph, a Levite from Cyprus, whom the apostles called Barnabas (which means Son of Encouragement), ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.
37 sold a field he owned, brought the money, and laid it at the apostles' feet. ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]