Skip to content
The Believer's Library

Biblica® Open Kannada Contemporary Version 2022

Acts 5 OKCV

Show OKCV only
Verse × ×
1 Now a man named Ananias, together with his wife Sapphira, sold a piece of property. ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.
2 He kept back part of the proceeds for himself, with his wife aware, and brought only a portion, laying it at the apostles' feet. ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.
3 But Peter said, "Ananias, why has Satan filled your heart to lie to the Holy Spirit and keep back part of the land's price? ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?
4 Wasn't it yours while unsold? After selling, wasn't the money yours to control? Why did you plan this in your heart? You didn't lie to people, but to our Father." ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.
5 Hearing these words, Ananias fell down and died; great fear seized all who heard. ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.
6 Then the young men rose, wrapped up his body, carried him out, and buried him. ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.
7 About three hours later his wife came in, not knowing what had happened. ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.
8 Peter asked her, "Tell me, did you sell the land for this much?" She said, "Yes, for that much." ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.
9 Then Peter said to her, "Why did you conspire to test the Spirit of our Father? Look, the feet of those who buried your husband are at the door, and they'll carry you out too." “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.
10 At once she fell at his feet and died. The young men came in, found her dead, carried her out, and buried her beside her husband. ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.
11 And great fear came upon the whole church and upon all who heard of these things. ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.
12 Many signs and wonders happened among the people through the apostles' hands. They all gathered together in Solomon's Portico. ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.
13 None of the rest dared to join them, but the people held them in high honor. ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.
14 Even more believers were added to the Lord—crowds of men and women, ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.
15 so they even carried the sick into the streets and put them on cots and mats, hoping that at least Peter's shadow might fall on some of them as he passed. ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.
16 Crowds also came from towns around Jerusalem, bringing the sick and those tormented by unclean spirits, and all were healed. ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.
17 The high priest rose up, and all with him, the Sadducee party, and they were filled with jealousy. ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.
18 They arrested the apostles and put them in the public prison. ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.
19 But at night an angel of our Father opened the prison doors, led them out, and said, ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,
20 "Go, stand in the temple and speak to the people all the words of this Life." “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.
21 Hearing this, they went into the temple at dawn and began teaching. When the high priest and those with him arrived, they convened the council—the full assembly of elders of Israel—and sent to the jail to have them brought. ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.
22 But the guards found no one there when they arrived; they returned and reported, ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,
23 "We found the prison locked tight, guards standing at the doors, but opening them, found no one inside." “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.
24 Hearing this, the temple guard captain and chief priests were baffled, wondering where it would lead. ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.
25 Someone came and reported, "Look, the men you jailed are standing in the temple teaching the people!" ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.
26 Then the captain and officers went and brought them, without force, fearing the people would stone them. ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.
27 When they had brought them, they set them before the council. And the high priest questioned them, ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.
28 saying, "We strictly ordered you not to teach in this name, yet you've filled Jerusalem with your teaching and intend to bring this man's blood on us." ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.
29 But Peter and the apostles answered, "We must obey our Father rather than men. ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!
30 The God of our fathers raised Jesus, whom you killed by hanging him on a tree. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.
31 Our Father exalted him to his own right hand as Ruler and Savior, to give Israel repentance and forgiveness of sins. ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.
32 We are witnesses of these things, and so is the Holy Spirit, whom our Father gave to those who obey him." ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.
33 When they heard this, they were enraged and wanted to kill them. ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.
34 But a Pharisee named Gamaliel, a law teacher honored by all the people, stood up in the council and ordered the men taken outside briefly. ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.
35 He told them, "Israelites, think carefully about what you're about to do with these men. ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.
36 Before this, Theudas appeared, claiming to be somebody; about 400 men followed him. He was killed, his followers all scattered, and it came to nothing. ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.
37 After him, Judas the Galilean rose up during the census and drew people away after him. He too died, and all who followed him were scattered. ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.
38 Now I tell you: stay away from these men and leave them alone. If this plan or work is from men, it will fail. ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.
39 But if it's from our Father, you won't be able to overthrow them; you might even find yourselves fighting our Father." So they were persuaded by him. ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.
40 Persuaded by him, they called in the apostles, beat them, ordered them not to speak in the name of Jesus, and released them. ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.
41 So they left the council, rejoicing they'd been counted worthy to be shamed for the name. ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.
42 Every day, in the temple and house to house, they never stopped teaching and proclaiming the good news: the Christ is Jesus. ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]