Skip to content
The Believer's Library

Biblica® Open Kannada Contemporary Version 2022

Acts 6 OKCV

Show OKCV only
Verse × ×
1 In those days, as the disciples multiplied, the Greek-speaking Jews grumbled against the Hebrews because their widows were overlooked in the daily distribution of food. ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.
2 So the Twelve called all the disciples together and said, "It's not right for us to neglect our Father's word to serve tables. ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.
3 So, brothers, pick seven men among you, well-respected, full of the Holy Spirit and wisdom, whom we'll appoint to this task. ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.
4 But we will devote ourselves to prayer and to the ministry of the word." ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.
5 The whole assembly approved, and chose Stephen—full of faith and the Holy Spirit—along with Philip, Prochorus, Nicanor, Timon, Parmenas, and Nicolaus, a convert from Antioch. ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.
6 They presented these men to the apostles, who prayed and laid their hands on them. ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.
7 The word of our Father spread, and disciples in Jerusalem multiplied greatly; a great number of priests became obedient to the faith. ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.
8 Now Stephen, full of grace and power, was performing great wonders and signs among the people. ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.
9 Some from the so-called Synagogue of the Freedmen—Cyrenians, Alexandrians, and men from Cilicia and Asia—rose up to argue with Stephen. ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.
10 Yet they could not stand up against the wisdom and the Spirit with which he was speaking. ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.
11 Then they secretly instructed men to say, "We heard him speak blasphemous words against Moses and God." ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.
12 They stirred up the people, elders, and scribes; came upon him, seized him, and brought him before the council. ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.
13 They brought in false witnesses, saying, "This man never stops speaking against this holy place and the law. ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.
14 For we heard him say this Jesus of Nazareth will destroy this place and change the customs Moses handed down to us." ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.
15 Everyone sitting in the council stared at him and saw his face was like an angel's face. ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]