1Then the high priest asked, "Are these things true?"OKCVಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.
2Stephen said, "Brothers and fathers, listen: Our Father of glory appeared to our father Abraham in Mesopotamia, before he lived in Haran,OKCVಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,
3and told him, 'Leave your land and relatives, and go to the land I'll show you.'OKCV‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.
4He left the Babylonians' land and settled in Haran. After his father died, our Father moved him from there into this land you now live in.OKCV“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.
5He gave him no inheritance in it, not even a foot of ground—yet promised it to him and his descendants after him as a possession, though he had no child.OKCVದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.
6And our Father said his offspring would be foreigners in a land not their own, enslaved and mistreated 400 years.OKCVಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು.
7'I will judge the nation they serve,' our Father said, 'and after, they will come out and worship me in this place.'OKCVಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.
8He gave him the covenant of circumcision. Abraham fathered Isaac and circumcised him on the eighth day; Isaac fathered Jacob, and Jacob the twelve ancestors.OKCVಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.
9The ancestors, jealous of Joseph, sold him into Egypt, but our Father was with him,OKCV“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,
10and rescued him from all his troubles, gave him favor and wisdom before Pharaoh king of Egypt, who made him ruler over Egypt and Pharaoh's whole household.OKCVಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.
11A famine and great suffering struck all Egypt and Canaan, and our fathers found no food.OKCV“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.
12Hearing there was grain in Egypt, Jacob sent our fathers there first.OKCVಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
13On the second visit, Joseph made himself known to his brothers, and Pharaoh learned of Joseph's family.OKCVಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.
14And Joseph sent for his father Jacob and all his relatives, seventy-five persons in all.OKCVಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.
15And Jacob went down into Egypt, and he died, he and our fathers.OKCVಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.
16They were taken back to Shechem, and buried in the tomb Abraham had bought for silver from Hamor's sons in Shechem.OKCVಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.
17As the time of the promise our Father gave Abraham neared, the people grew and multiplied in Egypt,OKCV“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.
18until there arose over Egypt another king who did not know Joseph.OKCVಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’
19This king exploited our people and mistreated our fathers, forcing them to abandon their infants to die.OKCVಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.
20At that time Moses was born, beautiful in our Father's sight. He was raised three months in his father's house.OKCV“ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.
21And when he was abandoned, Pharaoh's daughter adopted him and brought him up as her own son.OKCVಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು.
22Moses was trained in all Egyptian wisdom, and was strong in speech and action.OKCVಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.
23When he was forty years old, he decided to visit his brothers, the sons of Israel.OKCV“ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.
24Seeing one of them wronged, he defended the oppressed man and avenged him by striking down the Egyptian.OKCVತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.
25He thought his brothers would understand our Father was giving them salvation through his hand, but they didn't understand.OKCVದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.
26The next day he came upon them as they were fighting and tried to reconcile them, saying, 'Men, you are brothers. Why do you wrong each other?'OKCVಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.
27But the man wronging his neighbor shoved Moses aside, saying, 'Who made you ruler and judge over us?OKCV“ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?
28Do you want to kill me as you killed the Egyptian yesterday?'OKCVನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.
29At this word, Moses fled and lived as a foreigner in the land of Midian, where he fathered two sons.OKCVಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು.
30Forty years later, an angel appeared to him in the wilderness of Mount Sinai, in a burning bush's flame.OKCV“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.
31Moses saw it and was amazed; as he approached to look closer, our Father's voice came:OKCVಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.
32'I am the God of your fathers—the God of Abraham, Isaac, and Jacob.' Moses trembled, not daring to look.OKCV‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.
33Then our Father told him, 'Take the sandals off your feet, for the place you're standing on is holy ground.'OKCV“ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ.
34I have indeed seen my people's suffering in Egypt, heard their groaning, and come down to rescue them. Now go—I'm sending you to Egypt.OKCVಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.
35This Moses, whom they rejected, saying, 'Who made you ruler and judge?'—this is the one our Father sent as both ruler and redeemer, through the hand of the angel who appeared to him in the bush.OKCV“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.
36This man led them out, doing wonders and signs in the land of Egypt, at the Red Sea, and in the wilderness for forty years.OKCVಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.
37This is the Moses who told Israel's sons, 'Our Father will raise up a prophet like me for you, from your brothers.'OKCV“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.
38This is the one who was in the wilderness assembly with the angel speaking to him at Mount Sinai, and with our fathers—he received living words to give us.OKCVಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.
39Our fathers refused to obey him; they rejected him and in their hearts turned back to Egypt,OKCV“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.
40telling Aaron, 'Make us gods to go ahead of us. As for this Moses who led us out of the land of Egypt, we don't know what happened to him.'OKCVಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು.
41They made a calf in those days, offered a sacrifice to the idol, and celebrated what their hands had made.OKCVಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.
42But our Father turned away, giving them over to worship the host of heaven, as written in the prophets' book: 'Did you bring me slaughtered animals and sacrifices for forty years in the wilderness, house of Israel?OKCVಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.
43You carried Moloch's tent and your god Rephan's star, the idols you fashioned to worship them; so I will banish you far beyond Babylon.'OKCVಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.
44Our ancestors had the tent of witness in the wilderness, as he who spoke to Moses directed him to make it, matching the pattern he'd seen.OKCV“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.
45Our fathers in turn brought it in with Joshua when they dispossessed the nations that our Father drove out before them. So it was until the days of David,OKCVನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.
46who found favor with our Father and asked to find a dwelling place for our Father.OKCVದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.
47But it was Solomon who built a house for him.OKCVಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
48Yet the Most High does not live in houses made by human hands, as the prophet says:OKCV“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:
49'Heaven is my throne, and the earth is my footstool. What kind of house will you build for me, says our Father, or what is the place of my rest?OKCV“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?
50Did not my hand make all these things?'OKCVಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.
51"You stubborn people, uncircumcised in heart and ears, always resist the Holy Spirit—like your fathers, so do you.OKCV“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!
52Which of the prophets did your fathers not persecute? They killed those who announced beforehand the Righteous One's coming—whom you have now betrayed and murdered.OKCVನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.
53You who received the law through angels and yet did not keep it."OKCVದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.
54Now when they heard these things they were enraged, and they ground their teeth at him.OKCVಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.
55But Stephen, full of the Holy Spirit, looked into heaven, saw the glory of our Father, and Jesus standing at the right hand of our Father.OKCVಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.
56And he said, "Look, I see the heavens opened and the Son of Man standing at our Father's right hand."OKCV“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.
57But they cried out with a loud voice, covered their ears, and rushed at him.OKCVಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.
58They threw him out of the city and stoned him. The witnesses laid their coats at the feet of a young man named Saul.OKCVಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.
59And as they were stoning him, Stephen called out, "Lord Jesus, receive my spirit."OKCVನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.
60Kneeling, he cried out loudly, "Lord, do not hold this sin against them." Then he fell asleep.OKCVಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.