Skip to content
The Believer's Library

Biblica® Open Kannada Contemporary Version 2022

Acts 9 OKCV

Show OKCV only
Verse × ×
1 But Saul, still breathing threats and murder against the Lord's disciples, went to the high priest, ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,
2 and asked him for letters to Damascus's synagogues, so that if he found any of the Way, men or women, he could bring them bound to Jerusalem. ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.
3 As he traveled and was approaching Damascus, suddenly a light from heaven flashed around him. ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
4 He fell to the ground and heard a voice saying, "Saul, Saul, why are you persecuting me?" ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.
5 He said, "Who are you, Lord?" And he said, "I am Jesus, whom you are persecuting. “ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.
6 But rise and enter the city, and you will be told what you must do." ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.
7 The men traveling with him stood speechless, hearing the voice but seeing no one. ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಮೂಕರಂತೆ ನಿಂತುಕೊಂಡರು. ಅವರಿಗೆ ಧ್ವನಿ ಕೇಳಿಸಿತೇ ಹೊರತು ಯಾರೂ ಕಾಣಲಿಲ್ಲ.
8 Saul got up from the ground, but with eyes open he saw nothing; they led him by the hand and brought him into Damascus. ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು.
9 He was blind for three days and neither ate nor drank. ಮೂರು ದಿನ ಅವನು ಕುರುಡನಾಗಿದ್ದನು. ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
10 A disciple named Ananias lived in Damascus. In a vision the Lord said, "Ananias." He answered, "Here I am, Lord." ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, “ಅನನೀಯಾ!” ಎಂದು ಕರೆದರು. “ಇಗೋ, ಇದ್ದೇನೆ ಸ್ವಾಮಿ,” ಎಂದು ಅವನು ಉತ್ತರಕೊಟ್ಟನು.
11 The Lord said to him, "Get up, go to the street called Straight, and look in Judas's house for a man from Tarsus named Saul—he is praying, ಕರ್ತ ಯೇಸುವು ಅವನಿಗೆ, “ನೀನೆದ್ದು ‘ನೇರ ಬೀದಿ’ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬುವನನ್ನು ವಿಚಾರಿಸು. ಅವನು ಪ್ರಾರ್ಥನೆ ಮಾಡುತ್ತಿದ್ದಾನೆ.
12 and in a vision has seen a man named Ananias come in and place his hands on him so he may see again." ತನ್ನ ದೃಷ್ಟಿ ಪುನಃ ಬರುವಂತೆ ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ಬಂದು ತನ್ನ ಮೇಲೆ ಕೈಗಳನ್ನಿಡುವುದನ್ನು ಅವನು ದರ್ಶನದಲ್ಲಿ ಕಂಡಿದ್ದಾನೆ,” ಎಂದು ಹೇಳಿದರು.
13 Ananias replied, "Lord, many have told me about this man—the harm he's done your holy ones in Jerusalem. ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.
14 And here he has authority from the chief priests to bind all who call on your name." ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.
15 But the Lord said to him, "Go, for this man is my chosen instrument to carry my name before nations, kings, and Israel's people. ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.
16 For I will show him how much he must suffer for the sake of my name." ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.
17 Ananias went and entered the house. He laid hands on Saul and said, "Brother Saul, the Lord Jesus—who appeared to you on the road you traveled—sent me so you may see again and be filled with the Holy Spirit." ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,
18 Immediately something like scales fell from his eyes, and he could see again. He got up and was baptized, ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು.
19 and after eating, he regained his strength. For some days he was with the disciples in Damascus, ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.
20 and immediately he began proclaiming Jesus in the synagogues, that he is the Son of our Father. ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.
21 All who heard were amazed and said, "Isn't this the man who caused such havoc in Jerusalem among those calling on this name? And hasn't he come here for this: to bring them bound before the chief priests?" ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.
22 But Saul grew stronger still, bewildering the Jews living in Damascus by proving this one is the Christ. ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.
23 After many days had passed, the Jews plotted to kill him, ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.
24 but Saul learned of their plot; they watched the gates day and night to kill him, ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.
25 but at night his disciples lowered him through the wall in a basket. ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.
26 Arriving in Jerusalem, he tried to join the disciples, but all feared him, not believing he was a disciple. ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.
27 But Barnabas took him to the apostles and explained how Saul had seen the Lord on the road, who spoke to him, and how in Damascus he had spoken boldly in Jesus' name. ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.
28 So he was with them, moving freely about Jerusalem, speaking boldly in the name of the Lord. ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು.
29 He spoke and debated with the Hellenists, but they were seeking to kill him. ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.
30 When the brothers learned this, they brought him down to Caesarea and sent him off to Tarsus. ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
31 So the church throughout Judea, Galilee, and Samaria had peace and was strengthened; walking in the fear of the Lord and comforted by the Holy Spirit, it multiplied in number. ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.
32 As Peter traveled among all the believers, he also went down to the holy ones living in Lydda. ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.
33 There he found a man named Aeneas, bedridden for eight years, who was paralyzed. ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.
34 Peter said to him, "Aeneas, Jesus Christ heals you. Get up, make your bed." He got up at once. ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.
35 And all who lived in Lydda and Sharon saw him, and they turned to the Lord. ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.
36 In Joppa lived a disciple named Tabitha, meaning Dorcas. She was full of good works and help for the poor. ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.
37 In those days she got sick and died; they washed her and laid her in an upstairs room. ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.
38 Since Lydda was near Joppa, disciples who heard Peter was there sent two men to him, urging, "Don't delay coming to us." ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.
39 So Peter got up and went with them. When he arrived, they brought him to the upper room. All the widows stood beside him crying, showing the tunics and cloaks Dorcas had made while with them. ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.
40 Peter sent everyone out, knelt, and prayed. Turning to the body, he said, "Tabitha, get up." She opened her eyes, saw Peter, and sat up. ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
41 Giving her his hand, he raised her up. Calling the holy ones and the widows, he presented her alive. ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.
42 And it became known throughout all Joppa, and many believed in the Lord. ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.
43 And he stayed in Joppa for many days with a man named Simon, a tanner. ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]