Skip to content
The Believer's Library

Biblica® Open Kannada Contemporary Version 2022

Amos 1 OKCV

Show OKCV only
Verse × ×
1 The words of Amos, a shepherd of Tekoa, which he saw about Israel when Uzziah ruled Judah and Jeroboam son of Joash ruled Israel, two years before the earthquake. ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.
2 He said: Our Father roars from Zion, sounds his voice from Jerusalem; the shepherds' pastures mourn, and Carmel's summit withers. ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”
3 This is what our Father says: For three sins of Damascus, and for four, I will not turn it back, because they threshed Gilead with sledges of iron. ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
4 So I will send a fire upon the house of Hazael, and it will devour the strongholds of Ben-hadad. ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.
5 I will break the gate-bar of Damascus, and cut off the one who sits enthroned in the Valley of Aven and the one who holds the scepter in Beth-eden; and the people of Aram will go into exile to Kir, says our Father. ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.
6 So says our Father: For three crimes of Gaza, and for four, I will not reverse it—they exiled an entire people, handing them over to Edom. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.
7 So I will send a fire upon the wall of Gaza, and it will devour her strongholds. ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.
8 I will cut off the one enthroned in Ashdod and the one who holds the scepter in Ashkelon; I will turn my hand against Ekron, and the remnant of the Philistines will perish, says the Sovereign Father. ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
9 So says our Father: For three sins of Tyre, and for four, I will not relent, because they handed over a whole community of exiles to Edom and forgot the covenant of brothers. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.
10 So I will send a fire upon the wall of Tyre, and it will devour her strongholds. ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”
11 This is what our Father says: For three sins of Edom, and for four, I will not relent, because he chased his brother with the sword, stifled all compassion, his anger tore endlessly, and he kept his wrath forever. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.
12 So I will send a fire upon Teman, and it will devour the strongholds of Bozrah. ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”
13 This is what our Father says: For three sins of the Ammonites, and for four, I will not relent, because they ripped open Gilead's pregnant women to enlarge their border. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.
14 So I will kindle a fire on the wall of Rabbah, and it will devour her strongholds, with shouting on the day of battle, with a tempest on the day of the whirlwind. ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.
15 And their king will go into exile, he and his officials together, says our Father. ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]