Skip to content
The Believer's Library

Biblica® Open Kannada Contemporary Version 2022

Amos 2 OKCV

Show OKCV only
Verse × ×
1 This is what our Father says: For three sins of Moab, and for four, I will not revoke it—he burned the bones of Edom's king to lime. ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.
2 So I will send fire on Moab, and it will devour the strongholds of Kerioth; Moab will die amid the uproar, with shouting and the sound of the shofar. ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.
3 I will cut off the ruler from her midst and kill all her officials with him, says our Father. ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
4 This is what our Father says: For three sins of Judah, and for four, I will not revoke it—they rejected our Father's instruction and did not keep his rules, and their lies led them astray, the same lies their ancestors followed. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.
5 So I will send fire on Judah, and it will devour the strongholds of Jerusalem. ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”
6 This is what our Father says: For three sins of Israel, and four, I won't relent—they sell the righteous for silver, the needy for a pair of sandals. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.
7 They trample the heads of the poor into the dust of the earth and push the afflicted off the road. A man and his father go to the same girl, profaning my holy name. ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.
8 They stretch out beside every altar on garments taken as collateral, and in the house of their God they drink the wine of those they have fined. ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.
9 Yet it was I who destroyed the Amorite before them, as tall as the cedars and as strong as the oaks; I destroyed his fruit above and his roots below. “ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.
10 And it was I who brought you up out of the land of Egypt and led you forty years in the wilderness, to take possession of the land of the Amorite. ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.
11 I raised up some of your sons as prophets and some of your young men as Nazirites. Is this not so, people of Israel? declares our Father. “ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.
12 But you made the Nazirites drink wine, and you commanded the prophets, saying, "Do not prophesy." “ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.
13 Look, I will crush you in your place, as a cart full of sheaves crushes the ground beneath it. “ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
14 Even the swift will find no escape, the strong will not hold on to his strength, and the warrior will not save his life. ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
15 The archer will not stand his ground, the fleet-footed will not escape, and the horseman will not save his life. ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
16 Even the bravest of the warriors will flee away naked on that day, declares our Father. ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]