Skip to content
The Believer's Library

Biblica® Open Kannada Contemporary Version 2022

Amos 3 OKCV

Side by side with the Father's Heart Bible™

ಇಸ್ರಾಯೇಲಿಗೆ ವಿರುದ್ಧ ಸಾಕ್ಷಿಗಳನ್ನು ಕರೆಯಲಾದದ್ದು

1ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:

2“ಭೂಮಿಯ ಎಲ್ಲಾ ಕುಟುಂಬಗಳಲ್ಲಿನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ.ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”

3ಒಪ್ಪಂದ ಮಾಡಿಕೊಳ್ಳದ ಹೊರತು,ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?

4ಬೇಟೆ ಇಲ್ಲದಿದ್ದರೆ,ಅಡವಿಯಲ್ಲಿ ಸಿಂಹವು ಗರ್ಜಿಸುವುದೋ?ಏನಾದರೂ ಹಿಡಿಯದಿದ್ದರೆ,ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?

5ಬೋನು ಇಲ್ಲದಿದ್ದರೆಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ?ಏನೂ ಸಿಕ್ಕಿಕೊಳ್ಳದಿದ್ದರೆ,ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?

6ಪಟ್ಟಣದಲ್ಲಿ ಕಹಳೆಯನ್ನು ಊದಿದರೆ,ಜನರು ಹೆದರುವುದಿಲ್ಲವೇ?ಯೆಹೋವ ದೇವರಿಂದಲ್ಲದೆಪಟ್ಟಣಕ್ಕೆ ಕೇಡು ತಟ್ಟುವುದುಂಟೇ?

7ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆತನ್ನ ಯೋಜನೆಗಳನ್ನು ತಿಳಿಸದೆ,ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.

8ಸಿಂಹವು ಗರ್ಜಿಸಿದರೆಭಯಪಡದೆ ಇರುವವರು ಯಾರು?ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ,ಅವರ ನುಡಿಯನ್ನು ಪ್ರವಾದಿಸದವರು ಯಾರು?

9ಅಷ್ಡೋದಿನ ಕೋಟೆಗಳಲ್ಲಿಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ:“ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು,ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”

10“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ,ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,”ಎಂದು ಯೆಹೋವ ದೇವರು ಹೇಳುತ್ತಾರೆ.

11ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:“ವಿರೋಧಿಯು ದೇಶದ ಸುತ್ತಲೂ ಇರುವನು.ನಿನ್ನ ಬಲವನ್ನು ತಗ್ಗಿಸುವನು.ನಿನ್ನ ಅರಮನೆಗಳು ಸೂರೆಯಾಗುವುವು.”

12ಯೆಹೋವ ದೇವರು ಹೀಗೆ ಹೇಳುತ್ತಾರೆ:“ಹೇಗೆ ಕುರುಬನು ಸಿಂಹದ ಬಾಯಿಯಿಂದಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರುಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆಸಂರಕ್ಷಣೆ ಹೊಂದುತ್ತಾರೆ.”

13ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”

14“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ,ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು.ಬಲಿಪೀಠದ ಕೊಂಬುಗಳು ಕಡಿಯಲಾಗಿ,ನೆಲಕ್ಕೆ ಉರುಳುವುವು.

15ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡಹೊಡೆದು ಹಾಕುವೆನು.ಆಗ ದಂತ ಮಂದಿರಗಳು ನಾಶವಾಗುವುವು.ದೊಡ್ಡ ಮನೆಗಳು ಕೊನೆಗಾಣುವುವು,”ಎಂದು ಯೆಹೋವ ದೇವರು ಹೇಳುತ್ತಾರೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]