Skip to content
The Believer's Library

Biblica® Open Kannada Contemporary Version 2022

Amos 3 OKCV

Show OKCV only
Verse × ×
1 Hear this word our Father has spoken against you, children of Israel—against the whole family I brought up from Egypt: ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:
2 Of all the families of the earth, I have known only you; therefore I will hold you accountable for all your sins. “ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”
3 Do two walk together, unless they have agreed to meet? ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?
4 Does a lion roar in the forest when he has no prey? Does a young lion cry out from his den if he has caught nothing? ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?
5 Does a bird fall into a snare on the ground when there is no trap for it? Does a snare spring up from the earth when it has caught nothing? ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?
6 If a ram's horn is blown in a city, will the people not tremble? If disaster comes to a city, has our Father not done it? ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?
7 Surely the Sovereign Father does nothing without revealing his secret to his servants the prophets. ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.
8 The lion has roared—who will not fear? The Sovereign Father has spoken—who can keep from prophesying? ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?
9 Proclaim over the strongholds in Ashdod and over the strongholds in the land of Egypt, and say: "Assemble on the mountains of Samaria and see the great uproar within her, and the oppression in her midst." ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”
10 They do not know how to do right, declares our Father—those who hoard up violence and plunder in their strongholds. “ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
11 So the Sovereign Father says: An enemy will surround the land, topple your defenses, and loot your strongholds. ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”
12 This is what our Father says: As a shepherd rescues two legs or a piece of an ear from the lion's mouth, so the children of Israel living in Samaria will be rescued—with a corner of a couch, part of a bed. ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”
13 Hear, and testify against the house of Jacob, declares the Sovereign Father, the Father of heaven's armies: ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”
14 On the day I punish Israel for his rebellions, I will also punish the altars of Bethel; the horns of the altar will be cut off and fall to the ground. “ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.
15 I will strike the winter house along with the summer house; the houses of ivory will perish, and the great houses will come to an end, declares our Father. ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]