Skip to content
The Believer's Library

Biblica® Open Kannada Contemporary Version 2022

Amos 4 OKCV

Show OKCV only
Verse × ×
1 Hear this word, you cows of Bashan who are on the mountain of Samaria, you who oppress the poor, who crush the needy, who say to your masters, "Bring us something to drink!" ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.
2 The Sovereign Father has sworn by his holiness: "The days are coming upon you when they will drag you away with hooks, and the last of you with fishhooks. “ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.
3 You will go out through the breaches in the wall, each one straight ahead, and you will be flung out toward Harmon," declares our Father. ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ.
4 "Come to Bethel and rebel; to Gilgal, and rebel all the more! Bring your sacrifices every morning, your tithes every three days. “ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”
5 Burn leavened bread as a thank offering, announce your freewill offerings, proclaim them aloud—for this is what you love to do, people of Israel!" declares the Sovereign Father. “ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
6 "I gave you empty stomachs in every city and a lack of bread in every place, yet you did not return to me," declares our Father. “ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
7 "I also withheld the rain from you while there were still three months to the harvest. I would send rain on one city and withhold it from another; one field would be rained on, and the field with no rain would dry up. “ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.
8 So two or three cities would stagger to another city for water but not have enough to drink, yet you did not return to me," declares our Father. ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
9 "I struck you with blight and mildew; the locust devoured your many gardens and vineyards, your fig trees and your olive trees, yet you did not return to me," declares our Father. “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
10 "I sent a plague against you like the one in Egypt; I killed your young men with the sword and carried off your horses. I made the stench of your camp rise into your nostrils, yet you did not return to me," declares our Father. “ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
11 "I overthrew some of you as I overthrew Sodom and Gomorrah, and you were like a stick snatched from the fire, yet you did not return to me," declares our Father. “ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
12 "Therefore this is what I will do to you, Israel; and because I will do this to you, prepare to meet your Father, O Israel!" ಇಸ್ರಾಯೇಲೇ, ನಾನು ನಿನಗೆ ಹೀಗೆ ಮಾಡುತ್ತೇನೆ. ನಾನು ನಿನಗೆ ಹೀಗೆ ಮಾಡುವುದರಿಂದ, ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೋ.
13 For it is he who forms the mountains and creates the wind, who reveals his thoughts to mankind, who turns the dawn to darkness and treads on the heights of the earth—the Father of heaven's armies is his name. ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]