Skip to content
The Believer's Library

Biblica® Open Kannada Contemporary Version 2022

Amos 8 OKCV

Side by side with the Father's Heart Bible™

ಮಾಗಿದ ಹಣ್ಣುಗಳುಳ್ಳ ಪುಟ್ಟಿ

1ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು. 2ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.

3“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”

4ಬಡವರನ್ನು ನುಂಗುವವರೇ,ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.

5ನೀವು ಹೇಳುವುದೇನೆಂದರೆ,“ನಾವು ಧಾನ್ಯವನ್ನು ಮಾರುವ ಹಾಗೆಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ?ಗೋಧಿಯನ್ನು ಮಾರುವ ಹಾಗೆಸಬ್ಬತ್ ದಿನವು ಯಾವಾಗ ಮುಗಿಯುವುದು?ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ,ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,

6ಬಡವರನ್ನು ಬೆಳ್ಳಿಗೂದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು,ಹೌದು ಗೋಧಿಯ ಕಸವನ್ನು ಸಹ ಮಾರೋಣ.”

7ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.

8“ಇದಕ್ಕಾಗಿ ದೇಶವು ನಡುಗುವುದಿಲ್ಲವೇ?ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ?ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು,ಈಜಿಪ್ಟಿನ ನದಿಯಂತೆ ಇಳಿದುಹೋಗುವದು.

9“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ,“ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ.ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.

10ನಿಮ್ಮ ಹಬ್ಬಗಳನ್ನು ದುಃಖಕ್ಕೂ,ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು.ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು,ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು.ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು.ಅದರ ಅಂತ್ಯವು ಕಹಿಯಾದ ದಿನದಂತಿರುವುದು.

11ದಿನಗಳು ಬರುವುವು,ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು.ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ.ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ,ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.

12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ,ಉತ್ತರದಿಂದ ಪೂರ್ವಕ್ಕೂ ಅಲೆದುಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.

13“ಆ ದಿನದಲ್ಲಿ,“ಸೌಂದರ್ಯವತಿಯರಾದ ಕನ್ಯೆಯರುಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.

14ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು,ದಾನೇ, ನಿನ್ನ ದೇವರ ಜೀವದಾಣೆ ಎಂದೂ,ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು.ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]