Skip to content
The Believer's Library

Biblica® Open Kannada Contemporary Version 2022

Daniel 1 OKCV

Show OKCV only
Verse × ×
1 In Jehoiakim king of Judah's third year, Nebuchadnezzar king of Babylon marched on Jerusalem and besieged it. ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.
2 The Sovereign Father handed Jehoiakim king of Judah over to him, with some items from our Father's house; he took them to Shinar, to his god's house, and the items into his god's treasury. ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
3 The king ordered Ashpenaz, his chief official, to bring some Israelites from the royal family and nobility. ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ
4 Young men without defect, good-looking, skilled in all wisdom, well-informed, quick to understand, fit to stand in the king's palace—and to teach them Babylonian writing and language. ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
5 The king assigned them a daily portion of his food and wine, three years' training, then service before him. ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.
6 Among them were Daniel, Hananiah, Mishael, and Azariah, from the sons of Judah. ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.
7 The chief official renamed them: Daniel, Belteshazzar; Hananiah, Shadrach; Mishael, Meshach; Azariah, Abednego. ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.
8 Daniel resolved not to make himself unclean with the king's food or wine, so he asked the chief official's permission not to make himself unclean. ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.
9 Now our Father gave Daniel favor and compassion in the eyes of the chief official. ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.
10 The chief official told Daniel, "I fear my lord the king, who set your food and drink. Why should he see your faces worse than boys your age? You'd forfeit my head to the king." ಕಂಚುಕಿಯ ಯಜಮಾನನು ದಾನಿಯೇಲನಿಗೆ, “ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯ ಅರಸನಿಗೆ ನಾನು ಭಯಪಡುತ್ತೇನೆ. ಏಕೆಂದರೆ ಅರಸನು ಏಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಇತರ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು. ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ?” ಎಂದನು.
11 Then Daniel said to the steward the chief official had appointed over Daniel, Hananiah, Mishael, and Azariah, ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,
12 "Please test your servants for ten days. Give us only vegetables to eat and water to drink. “ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.
13 Then compare our appearance with the youths eating the king's food; do with your servants as you see." ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು.
14 So he agreed to this and tested them for ten days. ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು.
15 After ten days they looked healthier and better fed than all the young men eating the royal food. ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.
16 So the steward took away their assigned food and the wine they were to drink, and gave them vegetables instead. ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
17 To these four boys our Father gave knowledge and insight in all writing and wisdom; Daniel understood all visions and dreams. ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
18 When the king's set days for bringing them in ended, the chief official brought them before Nebuchadnezzar. ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
19 The king spoke with them, and none matched Daniel, Hananiah, Mishael, and Azariah; so they served the king. ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.
20 Whenever the king questioned them on wisdom and understanding, he found them ten times better than all magicians and enchanters in his whole kingdom. ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.
21 And Daniel remained there until the first year of King Cyrus. ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]