Skip to content
The Believer's Library

Biblica® Open Kannada Contemporary Version 2022

Daniel 10 OKCV

Show OKCV only
Verse × ×
1 In Cyrus king of Persia's third year, a message was revealed to Daniel, called Belteshazzar—true, about a great war. He understood it, gaining insight into the vision. ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.
2 In those days I, Daniel, was mourning for three full weeks. ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು.
3 I ate no fine food; no meat or wine touched my mouth; I used no oil at all, until three weeks passed. ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
4 On the twenty-fourth day of month one, I stood on the bank of the great river—the Tigris. ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
5 I looked up and saw a man in linen, a belt of fine gold of Uphaz around his waist. ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು.
6 His body like beryl, his face like lightning, his eyes like torches of fire, his arms and legs like polished bronze, and the sound of his words like a roaring crowd. ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.
7 I, Daniel, alone saw the vision; the men with me didn't see it, but great trembling fell on them, and they fled and hid. ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.
8 Left alone, I saw this great vision. No strength remained in me; my face turned deathly pale, and I kept no strength. ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
9 Then I heard his words, and hearing them, I fell face down on the ground in a deep sleep. ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.
10 Suddenly a hand touched me and set me trembling on my hands and knees. ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು.
11 He said to me, "Daniel, dearly loved man, understand the words I speak to you; stand up, for I am now sent to you." When he spoke this word to me, I stood up, trembling. ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.
12 He said to me, "Don't be afraid, Daniel. From the first day you set your heart to understand and humbled yourself before your Father, your words were heard, and I came because of your words. ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.
13 But the prince of Persia's kingdom opposed me twenty-one days; then Michael, one of the chief princes, came to help me, for I was left there with Persia's kings. ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.
14 I came to help you understand your people's future in days to come, for the vision is for days still ahead." ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.
15 As he spoke these words to me, I turned my face to the ground, unable to speak. ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
16 Then one like a man touched my lips. I opened my mouth and began to speak. I said to the one standing before me, "My lord, the vision has filled me with pain, and I have no strength left. ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.
17 How can I, your servant, speak with you, my lord? No strength remains in me now, no breath is left." ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”
18 Again the one who looked like a man touched me and strengthened me. ಆಮೇಲೆ ಪುನಃ ಮನುಷ್ಯನಂತಿದ್ದ ಒಬ್ಬ ನನ್ನನ್ನು ಬಲಪಡಿಸಿ,
19 He said, "Don't be afraid, treasured one. Peace to you; be strong, be strong!" His words strengthened me, and I said, "Speak, my lord, for you have strengthened me." “ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.
20 He said, "Do you know why I came to you? Now I return to fight Persia's prince; then, as I leave, Greece's prince comes. ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.
21 But first I'll tell you what's written in the Book of Truth: none stands firmly with me against them but Michael, your prince." ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]