Skip to content
The Believer's Library

Biblica® Open Kannada Contemporary Version 2022

Daniel 11 OKCV

Show OKCV only
Verse × ×
1 And I, in the first year of Darius the Mede, stood up to support and strengthen him. ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.
2 Now I'll tell you the truth: look, three more kings will rise in Persia, then a fourth far richer than all. Strengthened by his wealth, he will stir up everyone against Greece's kingdom. ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.
3 Then a mighty king will arise, who will rule with great dominion and do as he pleases. ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.
4 Once he rises, his kingdom will break apart and split toward the four winds of heaven—not to his descendants, nor with the power he held, for his kingdom will be uprooted and given to others besides them. ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.
5 The king of the south will grow strong; one of his commanders will grow stronger than him and rule—his dominion will be vast. ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.
6 After some years they will ally: the daughter of the king of the south will come to the king of the north to make an agreement. But she won't keep her strength, nor will he or his arm stand. She will be handed over—with her escort, her father, and her supporter—in those times. ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.
7 A shoot from her roots will rise in his place, attack the army, enter the north king's fortress, act against them, and prevail. ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.
8 He will take their gods captive to Egypt, with their metal images and precious silver and gold vessels; for years he will stay away from the king of the north. ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.
9 The king of the north will invade the king of the south's realm, then return home. ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು.
10 His sons will arm for war, gather a vast army that keeps coming, overflows, sweeps through, then renews war to his stronghold. ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.
11 The southern king, enraged, will march out to fight the northern king, who musters a vast army; but the army is given into the southern king's hand. ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.
12 When the crowd is carried off, his heart grows proud; he strikes down tens of thousands, yet fails. ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.
13 The king of the north will again raise a horde bigger than before, then after years come with a great army and vast supplies. ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.
14 In those times many will rise against the king of the south; violent men of your people will lift themselves up to fulfill the vision, but fail. ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು.
15 The king of the north will come, raise a siege ramp, and take a fortified city; the south's forces will not stand, nor its elite troops—no strength remains to stand. ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.
16 His invader does as he pleases; none can stand before him. He will stand in the splendid land, destruction in his hand. ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.
17 He will set out to enter with his kingdom's full strength, and make terms with him; he will give him a daughter of women to ruin it, but it will not stand or benefit him. ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.
18 Then he'll turn to the coastlands and take many, but a commander will end his arrogance, turning it back on him. ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.
19 Then he will turn his face toward the fortresses of his own land, stumble, fall, and be found no more. ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.
20 In his place will rise one who sends a tax collector for the glory of the kingdom; within a few days he'll be broken—not in anger, not in battle. ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ.
21 A despised man will rise in his place, denied royal honor. He'll come in a time of ease and seize the kingdom through flattery. ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
22 Armies will be swept away before him and broken, and the prince of the covenant as well. ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.
23 Once allied with him, he will act dishonestly and grow strong with only a few people. ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.
24 In a time of security, he will enter the province's richest regions and do what neither his fathers nor their fathers did—scattering plunder, spoil, and goods among them, devising schemes against fortresses, but only for a time. ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.
25 He will rouse his strength and courage against the king of the south with a great army. The king of the south will fight with a very great, mighty army—but won't stand, for plots will be devised against him. ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
26 Those who eat his food will break him; his army is swept away, and many fall slain. ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.
27 Both kings' hearts bent on evil will speak lies at one table, but it will fail—the end awaits its appointed time. ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.
28 He returns to his land with great wealth, heart against the holy covenant; he acts, then returns to his land. ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.
29 At the appointed time he will return and head south, but this time won't match the earlier or the latter. ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.
30 For ships of Kittim will come against him; he loses heart, turns back, rages against the holy covenant, and acts. He returns and favors those who abandon the holy covenant. ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.
31 His forces will rise, defile the sanctuary fortress, end the daily sacrifice, and set up the abomination that causes desolation. ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.
32 He will corrupt those who violate the covenant with flattery, but people who know their Father will stand firm and act. ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.
33 The wise among the people will teach many, but will fall for a time by sword, flame, captivity, and plunder. ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.
34 When they fall, they will receive a little help, and many will join them with flattery. ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.
35 Some of the wise will stumble, to be refined, purified, and cleansed until the end time, for it still awaits the set time. ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.
36 The king will do as he pleases, lifting and enlarging himself above every god, speaking shocking things against our Father. He will flourish until the wrath is spent, since what is decreed will happen. ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.
37 He will disregard his fathers' gods, women's desired one, and every god—he will set himself above them all. ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
38 Instead he'll honor a god of fortresses, unknown to his fathers, with gold, silver, precious stones, and costly gifts. ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.
39 With a foreign god he attacks the strongest fortresses. He greatly honors those who acknowledge him, gives them rule over many, and divides land for a price. ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.
40 At the end time, the king of the south will engage him, and the king of the north will storm against him with chariots, horsemen, and many ships. He will invade the lands, overflow, and pass through. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.
41 He enters the beautiful land; many fall, but Edom, Moab, and Ammon's chief sons escape his hand. ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
42 He will stretch out his hand against the lands, and the land of Egypt will not escape. ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು.
43 He will rule gold and silver treasures, and all Egypt's riches, with Libyans and Cushites at his heels. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು.
44 But news from the east and north will terrify him, and he'll set out in great rage to destroy and annihilate many. ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.
45 He will pitch his palace tents between the seas and the beautiful holy mountain, then come to his end with no helper. ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]