Skip to content
The Believer's Library

Biblica® Open Kannada Contemporary Version 2022

Daniel 12 OKCV

Show OKCV only
Verse × ×
1 At that time Michael, the great prince guarding your people's children, will arise. There will be distress unmatched since nations began, until then. At that time your people—all listed in the book—will be rescued. “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
2 Many sleeping in earth's dust will wake—some to everlasting life, some to shame and everlasting contempt. ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.
3 The wise will shine like the sky's brightness; those who turn many to righteousness, like stars, forever and ever. ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
4 But you, Daniel, close these words and seal the book until the end time. Many will roam back and forth, and knowledge will grow. ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.
5 Then I, Daniel, looked and saw two others standing, one on each bank of the river. ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
6 One asked the linen-clad man above the river's waters, "How long till these wonders end?" ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.
7 I heard the man dressed in linen, above the river's waters, lift his right hand and left toward heaven and swear by the One who lives forever: for a time, times, and half a time; when the shattering of the holy people's power is finished, all these things will be finished. ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
8 I heard, but didn't understand, so I said, "My lord, what is the end of these things?" ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.
9 He said, "Go, Daniel, for the words are shut and sealed until the time of the end. ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.
10 Many will be purified, whitened, refined; the wicked will keep doing evil. None of the wicked will understand, but the wise will understand. ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.
11 From the daily sacrifice's removal and the setting up of the abomination that causes desolation: 1,290 days. “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.
12 Blessed is the one who waits and reaches the 1,335 days. 1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.
13 But you, go to the end. You will rest, then stand for your inheritance at the end of the days." “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]