1In the second year of his reign, Nebuchadnezzar had dreams; his spirit was troubled and his sleep left him.OKCVನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.
2So the king ordered the magicians, enchanters, sorcerers, and astrologers summoned to tell him his dreams. They came and stood before the king.OKCVಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
3The king said to them, "I dreamed a dream, and my spirit is troubled to know the dream."OKCVಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
4Then the astrologers said to the king in Aramaic, "King, live forever! Tell your servants the dream, and we will reveal its interpretation."OKCVಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.
5The king answered the astrologers, "My decree is firm: if you don't tell me the dream and its meaning, you'll be cut to pieces and your houses reduced to rubble.OKCVಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
6But if you tell the dream and its meaning, you'll receive gifts, rewards, and great honor from me. So tell me the dream and its meaning."OKCVಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
7They answered a second time, "Let the king tell his servants the dream, and we will give its meaning."OKCVಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.
8The king replied, "I know for certain you're trying to buy time, because you see my decree is firm:OKCVಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.
9If you don't tell me the dream, there is only one verdict for you. You have agreed to speak lying, corrupt words before me until the times change. So tell me the dream, then I'll know you can reveal its interpretation."OKCVನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
10The astrologers answered the king, "No one on earth can do what the king asks. No great, powerful king ever demanded such a thing of any magician, enchanter, or Chaldean.OKCVಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
11The king's request is too hard; only the gods, who don't live among mortals, can reveal it to the king."OKCVಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”
12At this the king grew angry and furious, and ordered all Babylon's wise men destroyed.OKCVಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.
13So the decree went out to kill the wise men, and they searched for Daniel and his companions to put them to death.OKCVಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
14Then Daniel answered Arioch, the king's guard commander, with wisdom and discretion; Arioch had gone out to kill Babylon's wise men.OKCVಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.
15He asked Arioch, the king's officer, "Why such a harsh decree from the king?" Then Arioch explained it to Daniel.OKCVದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.
16So Daniel went in and asked the king for time, so that he might reveal the interpretation to the king.OKCVಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
17Then Daniel went home and told his companions Hananiah, Mishael, and Azariah about the matter,OKCVಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
18urging them to plead for mercy from our Father in heaven about this mystery, so Daniel and his companions wouldn't be destroyed with Babylon's other wise men.OKCVದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
19Then the mystery was revealed to Daniel in a night vision, and Daniel blessed our Father in heaven.OKCVಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,
20Daniel said: "Blessed be the name of our Father forever and ever, for wisdom and might belong to him.OKCVಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.
21He changes times and seasons; he removes kings and sets up kings; he gives wisdom to the wise and knowledge to those who have understanding.OKCVಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.
22He reveals deep and hidden things; he knows what lies in darkness, and the light dwells with him.OKCVಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.
23To you, the God of my fathers, I give thanks and praise, for you have given me wisdom and might, and now you have made known to me what we asked of you; you have made known to us the king's matter."OKCVನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”
24So Daniel went to Arioch, whom the king had appointed to destroy Babylon's wise men, and said, "Don't destroy Babylon's wise men. Take me to the king, and I will give him the interpretation."OKCVದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.
25Then Arioch quickly brought Daniel before the king and said, "Among the exiles of Judah I found a man who can tell the king the interpretation."OKCVಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.
26The king asked Daniel, called Belteshazzar, "Can you tell me the dream I saw and what it means?"OKCVಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.
27Daniel answered the king, "No wise men, enchanters, magicians, or astrologers can reveal the mystery the king asks about.OKCVದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
28But our Father in heaven reveals mysteries, and has made known to King Nebuchadnezzar what will happen in the latter days. Your dream and the visions in your mind as you lay on your bed were these:OKCVಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
29"As you lay in bed, O king, your thoughts turned to what would come, and the revealer of mysteries showed you what is to be.OKCV“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.
30But this mystery was revealed to me not because I have more wisdom than anyone else alive, but so the king may know its interpretation, and you may understand your heart's thoughts.OKCVಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.
31"You watched, O king, and saw a great statue. This statue, huge and dazzling in brightness, stood before you, and its appearance was terrifying.OKCV“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.
32The statue's head was fine gold, its chest and arms silver, its belly and thighs bronze,OKCVಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,
33its legs of iron, its feet partly of iron and partly of clay.OKCVಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.
34While you watched, a stone cut without hands struck the statue's feet of iron and clay, crushing them.OKCVನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.
35Then the iron, clay, bronze, silver, and gold were all broken to pieces together, becoming like chaff on a summer threshing floor. The wind carried them off, leaving no trace. But the stone that struck the statue became a great mountain filling the whole earth.OKCVಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
36"This was the dream. Now we will tell the king its interpretation.OKCV“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.
37You, king, are the king of kings, to whom our Father in heaven has given kingdom, power, might, and glory.OKCVಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.
38Into your hand he has placed all people, the beasts of the field, and the birds of the sky, wherever they live, making you ruler over them all. You are the head of gold.OKCVಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.
39"After you another kingdom will arise, inferior to yours; then a third kingdom, of bronze, ruling over all the earth.OKCV“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.
40A fourth kingdom will be strong as iron—iron breaks and shatters everything—and as iron crushes all these, it will break and crush them.OKCVಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
41As you saw the feet and toes—part potter's clay, part iron—it will be a divided kingdom; yet it will have some of iron's strength, just as you saw iron mixed with soft clay.OKCVಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.
42As the toes were partly iron and partly clay, so the kingdom will be partly strong and partly brittle.OKCVಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.
43As you saw iron mixed with soft clay, the people will mix in marriage but not hold together, just as iron does not mix with clay.OKCVನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.
44"In those kings' days our Father in heaven will set up a kingdom never to be destroyed, nor its rule left to another people. It will crush all these kingdoms and end them, and it will stand forever.OKCV“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.
45This is what the vision meant: the stone cut from a mountain, not by human hands, broke the iron, bronze, clay, silver, and gold to pieces. Our great Father has shown the king what will happen after this. The dream is certain, its interpretation trustworthy."OKCVಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.
46Then King Nebuchadnezzar fell facedown, bowed to Daniel, and ordered offering and incense given to him.OKCVಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.
47The king told Daniel, "Truly your God is God of gods, Lord of kings, and revealer of secrets, since you could reveal it."OKCVಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.
48Then the king promoted Daniel to high honor, gave him many great gifts, and made him ruler of Babylon's whole province and chief prefect over all its wise men.OKCVಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.
49Daniel asked the king, who put Shadrach, Meshach, and Abednego over Babylon province's affairs; Daniel remained at the king's court.OKCVದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.