Skip to content
The Believer's Library

Biblica® Open Kannada Contemporary Version 2022

Daniel 3 OKCV

Show OKCV only
Verse × ×
1 King Nebuchadnezzar made a gold statue, about ninety feet tall and nine feet wide, and set it up on the Dura plain in Babylon province. ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 King Nebuchadnezzar sent for the satraps, prefects, governors, counselors, treasurers, judges, magistrates, and all provincial officials to come to the dedication of the image he had set up. ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.
3 Then satraps, prefects, governors, counselors, treasurers, judges, magistrates, and all provincial officials gathered to dedicate the statue King Nebuchadnezzar set up, and stood before the statue Nebuchadnezzar set up. ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.
4 Then the herald proclaimed loudly, "Peoples, nations, and languages—you are commanded: ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ
5 When you hear the horn, flute, lyre, harp, zither, bagpipe, and all music, fall down and worship the gold image King Nebuchadnezzar set up. ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
6 Anyone who doesn't fall down and worship will immediately be thrown into a blazing fiery furnace." ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.
7 As soon as all peoples heard the horn, flute, lyre, harp, zither, and every kind of music, all peoples, nations, and languages fell down and worshiped the golden image King Nebuchadnezzar had set up. ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
8 At that time certain astrologers came forward and maliciously accused the Jews. ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು
9 They said to King Nebuchadnezzar, "King, may you live forever! ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
10 You, king, decreed: whoever hears the horn, flute, lyre, harp, zither, bagpipe, and any music must fall down and worship the gold image, ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
11 and whoever does not fall down and worship will be thrown into a blazing fiery furnace. ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?
12 Some Jews you put in charge of Babylon province—Shadrach, Meshach, and Abednego—disregard you, king. They won't serve your gods or worship the gold statue you set up." ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.
13 Furious, Nebuchadnezzar ordered Shadrach, Meshach, and Abednego brought; they were brought before the king. ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.
14 Nebuchadnezzar said, "Shadrach, Meshach, Abednego, is it true you don't serve my gods or worship the gold statue I set up? ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?
15 Now if you're ready—when horn, flute, lyre, harp, zither, bagpipe, and every kind of music sound, fall down and worship the image I made—good. But if you don't worship, you'll be thrown at once into a blazing fiery furnace. What god can rescue you from my hands?" ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
16 Shadrach, Meshach, and Abednego answered the king, "Nebuchadnezzar, we don't need to answer you about this. ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
17 If our Father, whom we serve, can rescue us, he will rescue us from the blazing furnace and from your hand, king. ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.
18 But if not, know this, king: we won't serve your gods or worship the gold statue you set up." ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.
19 Then Nebuchadnezzar, furious, his expression changed toward Shadrach, Meshach, and Abednego; he ordered the furnace heated seven times hotter than normal. ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.
20 He ordered some of his strongest soldiers to bind Shadrach, Meshach, and Abednego and throw them into the blazing furnace. ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
21 So these men, tied up in cloaks, trousers, turbans, and other garments, were thrown into the blazing fiery furnace. ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.
22 Because of the king's harsh order and furnace's extreme heat, the fire's flame killed the men who lifted up Shadrach, Meshach, and Abednego. ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.
23 These three men—Shadrach, Meshach, and Abednego—fell bound into the blazing furnace. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.
24 Then King Nebuchadnezzar, astonished, rose in haste. He asked his advisers, "Didn't we throw three bound men into the fire?" They answered the king, "True, king." ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.
25 He said, "Look—I see four men, unbound, walking in the middle of the fire, unharmed; the fourth looks like a son of the gods." ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.
26 Nebuchadnezzar went to the blazing furnace's door and said, "Shadrach, Meshach, and Abednego, servants of the Most High God, come out here!" Shadrach, Meshach, and Abednego came out of the fire. ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
27 The satraps, prefects, governors, and king's counselors gathered and saw fire had no power over these men's bodies—hair not singed, robes unharmed, no smell of fire on them. ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.
28 Nebuchadnezzar said, "Blessed be the God of Shadrach, Meshach, and Abednego! He sent his angel and rescued his trusting servants. They defied the king's command and were willing to die rather than serve or worship any god but their own God. ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.
29 I decree: any people, nation, or language that speaks anything against the God of Shadrach, Meshach, and Abednego will be cut to pieces, their houses turned to rubble—since no other god can rescue like this." ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.
30 Then the king promoted Shadrach, Meshach, and Abednego in the province of Babylon. ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]